ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಯುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಕಳೆದ ಒಂದು ವರ್ಷದಲ್ಲಿ 967 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.
ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆ’ (ಬಿಎಂಐಸಿ) ಪ್ರಗತಿ ಪರಿಶೀಲನೆ ನಡೆಸಿ ಯೋಜನೆ ಮುಂದುವರೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ಶಿಫಾರಸು ಮಾಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಒಟ್ಟು 7 ಸದಸ್ಯರ ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ
ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಶುಕ್ರವಾರ ರಾತ್ರಿ ಆಗಂತುಕರು ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡೆಡ್ಲೈನ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಸರ್ಕಾರಕ್ಕೆ ಮೂಗುದಾರ ಹಾಕಿದ ಸುಪ್ರೀಂಕೋರ್ಟ್ನ ಆದೇಶವನ್ನು ಬಿಜೆಪಿಯ ಹಿರಿಯ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ಖಂಡಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್ ಚಂದ್ರ ರಾಯ್ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.245ರಷ್ಟು ಭಾರೀ ತೆರಿಗೆ ಹೇರಿದ ಬೆನ್ನಲ್ಲೇ ಚೀನಾ ಇದೀಗ ಭಾರತದತ್ತ ಸ್ನೇಹದ ಹಸ್ತ ಚಾಚಿದೆ. ಭಾರತದ ಪ್ರೀಮಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ತಾನು ಸಿದ್ಧ ಎಂದು ಚೀನಾ ಘೋಷಿಸಿದೆ.
ಸದಾ ವಿವಾದಿತ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ
ಬೀದರ್ ಹಾಗೂ ಶಿವಮೊಗ್ಗದಲ್ಲಿ ಜನಿವಾರ ಧಾರಿ ವಿದ್ಯಾರ್ಥಿಗಳಿಗೆ ಸಿಇಟಿ ಬರೆಯಲು ಅಡ್ಡಿ ಮಾಡಿದ ಪ್ರಸಂಗಗಳು ನಡೆದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರ ಠಾಣೆಗೆ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.
ರಾಜ್ಯವಷ್ಟೇ ಅಲ್ಲದೆ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾದ ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಆಕ್ಷೇಪ ಪ್ರಕರಣ ಶನಿವಾರ ಕೊನೆಗೂ ಒಂದು ಹಂತದಲ್ಲಿ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಿಕೆ ಆರಂಭವಾಗಿದೆ.
ಇಡೀ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು (ಒಬಿಸಿ) ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.