ಯಾವುದೇ ಜಾತಿಯಲ್ಲಿ ಹುಟ್ಟಿದ ಕಾರಣಕ್ಕೆ ಯಾರೂ ದಡ್ಡರಾಗುವುದಿಲ್ಲ. ಅವಕಾಶ ಸಿಕ್ಕರೆ ಯಾವ ಸಮುದಾಯದ ಮಕ್ಕಳಾದರೂ ಬುದ್ಧಿವಂತರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.
ನೇಹಾ ಹಿರೇಮಠ ಕೊಲೆಯಾಗಿ ವರ್ಷವಾದರೂ ನ್ಯಾಯ ಸಿಕ್ಕಿಲ್ಲ. ಆರೋಪಿ ಜೈಲಿನಲ್ಲಿ ಆರಾಮಾಗಿ ಕಾಲಕಳೆಯುತ್ತಿದ್ದಾನೆ. ಆತನಿಗೆ ಯಾಕೆ ಶಿಕ್ಷೆಯಾಗಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.
ಆರ್ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್ಸಿಬಿಗೆ 5 ವಿಕೆಟ್ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್ ವೈಫಲ್ಯ ಕಂಡ ಆರ್ಸಿಬಿ, 3ನೇ ಸೋಲುಂಡಿತು.
ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ‘ವಿದ್ಯಾಸಿರಿ’ ಯೋಜನೆಯಡಿ ನೀಡುತ್ತಿರುವ ಮಾಸಿಕ 1500 ರು. ವಿದ್ಯಾರ್ಥಿವೇತನವನ್ನು 2000 ರು.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಇದರ ಬೆನ್ನಲ್ಲೇ ಇತರ ಭಿನ್ನಮತೀಯ ಮುಖಂಡರ ಮನವೊಲಿಸಲು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತರು ಮುಂದಾಗಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ನಿವಾರಿಸಲು ಕರ್ನಾಟಕದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಆದಷ್ಟು ಬೇಗ ಜಾರಿಗೆ ತರುತ್ತೇವೆ’ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
‘ಜಾತಿಗಣತಿ ವರದಿ ಬಗ್ಗೆ ಯಾವುದೇ ಸಚಿವರಿಂದ ವಿರೋಧ ವ್ಯಕ್ತವಾಗಿಲ್ಲ, ಯಾರ ನಡುವೆಯೂ ಮಾತಿನ ಚಕಮಕಿಯೂ ನಡೆದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸಂಯುಕ್ತ ಖಾಜಿಗಳು, ಧರ್ಮಗುರುಗಳ ನೇತೃತ್ವದಲ್ಲಿ ಕರಾವಳಿಯ ಮುಸ್ಲಿಂ ಸಮುದಾಯ ಶುಕ್ರವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಸಿಇಟಿ ಪರೀಕ್ಷೆ ವೇಳೆ ಬೀದರ್ನ ಸಾಯಿಸ್ಫೂರ್ತಿ ಕಾಲೇಜಿನಲ್ಲಿ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.