ಪಶ್ಚಿಮಘಟ್ಟದ ಕಾಡುಗಳು ವಿಶ್ವದ ಪಾರಂಪರಿಕ ತಾಣಗಳಲ್ಲಿ ಒಂದು. ಗುಜರಾತಿನಿಂದ ಕೇರಳದವರೆಗೆ ಹಬ್ಬಿರುವ ಈ ನಿತ್ಯಹರಿದ್ವರ್ಣದ ಸಹ್ಯಾದ್ರಿ ಪರ್ವತ ಶ್ರೇಣಿಯ ತಪ್ಪಲಿನಲ್ಲಿ ನಾಡಿನ ಹೆಮ್ಮೆಯ ಭದ್ರಾ ಹುಲಿ ಅಭಯಾರಣ್ಯ ನೆಲೆನಿಂತಿದೆ.
ಮೊದಲ ವಿಶ್ವ ಯುದ್ಧದಲ್ಲಿ ಬ್ರಿಟನ್ ಗೆಲುವಿಗೆ ನೆರವಾದರೂ ಕೃತಘ್ನ ಆಂಗ್ಲರ ಅಮಾನುಷ ಕ್ರೌರ್ಯಕ್ಕೆ ಪ್ರಾಣ ತೆತ್ತ ಭಾರತೀಯರು
ಹನಿಟ್ರ್ಯಾಪ್ ಪ್ರಕರಣದ ತನಿಖೆ ನಡೆಯುತ್ತಿದೆ. ನಾನು ಸಹ ಏ.14ರ ಬಳಿಕ ಸಿಐಡಿ ವಿಚಾರಣೆಗೆ ಹೋಗುತ್ತೇನೆ. ಪ್ರಕರಣದಿಂದ ಯಾರಿಗೆ ಬೇಸರ, ಯಾರಿಗೆ ಖುಷಿ ಆಗಿದೆಯೋ ಗೊತ್ತಿಲ್ಲ. ಆದರೆ ನಾನಂತು ನನ್ನ ಗೌರವ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣಕ್ಕೆ ಕಿಕ್ಬ್ಯಾಕ್ ಆರೋಪ ಬಂದಿದ್ದು, ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮಕ್ಕೆ ಉತ್ತರ ನೀಡಬೇಕು ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಷ್ಟದ ನೆಪ ಹೇಳಿ ಹಾಲು ಉತ್ಪಾದಕರಿಗೆ ದರ ಕಡಿತ ಮಾಡಿದ್ದ ಹಾವೇರಿ ಹಾಲು ಒಕ್ಕೂಟ (ಹಾವೆಮುಲ್) ಕೊನೆಗೂ ಲೀಟರ್ಗೆ ₹4 ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
:ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.
ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
‘ಬಾಬಾಸಾಹೇಬರ ನಿಪ್ಪಾಣಿ ಭೇಟಿಗೆ 100 ಸಂಭ್ರಮ’
- ಬಿಜೆಪಿಯಿಂದ ‘ಭೀಮ ಹೆಜ್ಜೆ-100ರ ಸಂಭ್ರಮ’ ರಥಯಾತ್ರೆ । 15ಕ್ಕೆ ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.