ಬಿಬಿಎಂಪಿಯ 19 ಪದವಿ ಪೂರ್ವ ಕಾಲೇಜಿನ 2,345 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಈ ಪೈಕಿ 1,645 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.70.15 ರಷ್ಟು ಫಲಿತಾಂಶ ಬಂದಿದೆ ಎಂದು ಬಿಬಿಎಂಪಿ ತಿಳಿಸಿದೆ.
ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನ ಸೇವೆ ಪುನರಾರಂಭಿಸಲಾಗುತ್ತಿದ್ದು, ಸ್ಟಾರ್ ಏರ್ ವಿಮಾನಯಾನ ಸಂಸ್ಥೆ ಏ.15ರಿಂದ ಬೀದರ್-ಬೆಂಗಳೂರು ನಡುವೆ ವಿಮಾನಯಾನ ಸೇವೆ ಮತ್ತೆ ಆರಂಭಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆಯಡಿ ನಗರದ ಉದ್ಯಾನವನ, ರಸ್ತೆ ವಿಭಜಕ, ವೃತ್ತ ಹಾಗೂ ಐಲ್ಯಾಂಡ್ ನಿರ್ವಹಣೆ ಮತ್ತು ಅಭಿವೃದ್ಧಿ ಮಾಡಲು 33 ಸಂಸ್ಥೆ ಮುಂದೆ ಬಂದಿವೆ.
ಹಾಲಿನ ದರ ಏರಿಕೆಯನ್ನೇ ನೆಪ ಮಾಡಿಕೊಂಡಿರುವ ನಗರದ ಹೋಟೆಲ್ ಮಾಲೀಕರು ಕಾಫಿ-ಟೀ ಪ್ರಿಯರ ಸುಲಿಗೆಗೆ ಇಳಿದಿರುವ ಆರೋಪ ಕೇಳಿಬಂದಿದೆ.
ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಮೂರು ಸ್ಥಳಗಳ ಪೈಕಿ ಎರಡು ಸ್ಥಳಗಳಿಗೆ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರ (ಎಎಐ)ದ ಉನ್ನತ ಮಟ್ಟದ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿ ಅಂಗವಿಕಲನೋರ್ವ ಹೊಂದಿದ್ದ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಯನ್ನು ತೆರವುಗೊಳಿರುವ ಹಿನ್ನೆಲೆಯಲ್ಲಿ ಮತ್ತೆ ಮಳಿಗೆ ಆರಂಭಿಸಲು ಸ್ಥಳಾವಕಾಶ ಕಲ್ಪಿಸುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಹೆಸರಾಂತ ಲೇಖಕಿ, ಹೋರಾಟಗಾರ್ತಿ ಹಾಗೂ ವಕೀಲೆ ಬಾನು ಮುಷ್ತಾಕ್ ಅವರ ಸಣ್ಣಕಥೆಗಳ ಸಂಕಲನ ‘ಹಾರ್ಟ್ ಲ್ಯಾಂಪ್’ 2025ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಶಾರ್ಟ್ಲಿಸ್ಟ್ನಲ್ಲಿ ಸೇರ್ಪಡೆಯಾಗಿದೆ. ಈ ಕೃತಿಯನ್ನು ಕನ್ನಡಿಗ ಪತ್ರಕರ್ತೆ ದೀಪಾ ಭಸ್ತಿ ಕನ್ನಡದಿಂದ ಇಂಗ್ಲಿಷ್ಗೆ ಅನುವಾದಿಸಿದ್ದಾರೆ.
2023-24ನೇ ವಿತ್ತ ವರ್ಷದಲ್ಲಿ ರಾಷ್ಟ್ರೀಯ ಪಕ್ಷಗಳು ಒಟ್ಟು 2,544.278 ಕೋಟಿ ರು. ದೇಣಿಗೆ ಸಂಗ್ರಹಿಸಿವೆ. ಇದರಲ್ಲಿ ಬಿಜೆಪಿ ಒಂದೇ 2243 ಕೋಟಿ ರು. ದೇಣಿಗೆ ಸ್ವೀಕರಿಸಿ ನಂ.1 ಪಕ್ಷವಾಗಿ ಹೊರಹೊಮ್ಮಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.
ಚೀನಾ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗದಾಪ್ರಹಾರ ನಡೆಸಿದ್ದಾರೆ. ತನ್ನ ಮೇಲೆ ಹೇರಿದ್ದ ಶೇ.34ರಷ್ಟು ತೆರಿಗೆ ಹಿಂಪಡೆಯಲು ಚೀನಾ ನಿರಾಕರಿಸಿದ ಬೆನ್ನಲ್ಲೇ, ಆ ದೇಶದ ಮೇಲೆ ಹೆಚ್ಚುವರಿ ಶೇ.50ರಷ್ಟು ತೆರಿಗೆ ಹಾಕುವುದಾಗಿ ಟ್ರಂಪ್ ಘೋಷಿಸಿದ್ಧಾರೆ.
ಅನಧಿಕೃತ ಆಸ್ತಿಗಳಿಗೆ ಪ್ರತ್ಯೇಕ ಖಾತಾ ನೀಡಿ ದಂಡ ವಿಧಿಸಿ ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಮಾಡಿಕೊಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ -2025ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಕಾಯಿದೆ ಜಾರಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.