ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಹಿಂದುಳಿದವರು ಮತ್ತು ದಲಿತರನ್ನು ಮರೆತು, ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಇಂದಿನಿಂದ (ಏ.7) ಮೂರು ದಿನ ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ (ಕೆಐಎ) ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, 2024-25ನೇ ಸಾಲಿನಲ್ಲಿ 4.18 ಕೋಟಿ ಮಂದಿ ಕೆಐಎ ಮೂಲಕ ವಿಮಾನ ಯಾನ ಸೇವೆ ಪಡೆದಿದ್ದಾರೆ.
ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು
ದಾಂಪತ್ಯ ಕಲಹದಿಂದ ಮನನೊಂದು ಸಾಫ್ಟ್ವೇರ್ ಎಂಜಿನಿಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್.ವಿ.ರಸ್ತೆ- ಬೊಮ್ಮಸಂದ್ರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಹಳದಿ ಮಾರ್ಗ (19.15 ಕಿ.ಮೀ.) ಜೂನ್ ಅಂತ್ಯ ಅಥವಾ ಜುಲೈ ಆರಂಭದಲ್ಲಿ ತನ್ನ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ.
ಭೂ ವಿವಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಇನ್ಸ್ಪೆಕ್ಟರ್ ಎ.ವಿ.ಕುಮಾರ್ ಅವರನ್ನು ನಗರ ಪೊಲೀಸ್ ಆಯುಕ್ತರು ಎತ್ತಂಗಡಿ ಮಾಡಿದ್ದಾರೆ.
ಆಸ್ತಿ ವಿಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಏಳು ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಉದ್ಯಮಿಯೊಬ್ಬರು ಪಡೆದಿದ್ದ ₹13 ಲಕ್ಷ ಸಾಲಕ್ಕೆ ಬಡ್ಡಿ ರೂಪದಲ್ಲಿ ₹63 ಲಕ್ಷ ಪಡೆದರೂ ಮತ್ತಷ್ಟು ಹಣಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿರುವ ಆರೋಪದಡಿ ಮೂವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.