ಭಾರತೀಯ ರಿಸರ್ವ್ ಬ್ಯಾಂಕ್ನ ತ್ರೈಮಾಸಿಕ ವಿತ್ತ ನೀತಿ ಏ.9ರಂದು ಪ್ರಕಟವಾಗಲಿದ್ದು, ಈ ಬಾರಿಯೂ ಆರ್ಬಿಐ 25 ಬಿಪಿಎಸ್ ಅಂಕ (ಶೇ.0.25ರಷ್ಟು) ಬಡ್ಡಿ ದರವನ್ನು ಕಡಿತ ಮಾಡಬಹುದು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.
ಸೋಲಿನೊಂದಿಗೆ ಈ ಬಾರಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ್ದರೂ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ಹಾಲಿ ಚಾಂಪಿಯನ್ ಕೋಲ್ಕತಾ ಹಾಗೂ ಲಖನೌ ಸೂಪರ್ ಜೈಂಟ್ಸ್ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ.
ಕಳೆದ 10 ವರ್ಷಗಳಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗೆಲುವಿಗೆ ಹಾತೊರೆಯುತ್ತಿದ್ದ ಆರ್ಸಿಬಿಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಸೋಮವಾರ ಮುಂಬೈ ವಿರುದ್ಧ ಆರ್ಸಿಬಿ 12 ರನ್ ಗೆಲುವು ಸಾಧಿಸಿತು
ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಭ್ರಷ್ಟಾಚಾರ, ದಲಿತರ ಹಣ ಲೂಟಿ, ಮುಸ್ಲಿಮರ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಕೈಗೊಂಡಿರುವ ಜನಾಕ್ರೋಶ ಯಾತ್ರೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು
ಆ ಕಳ್ಳ ಒಳ್ಳೆಯವ: ಅಜ್ಜಿ ರಾಕ್, ಪೊಲೀಸ್ ಶಾಕ್!
- ದರೋಡೆ ಬಳಿಕ ಅಜ್ಜಿಯ ಕಾಲಿಗೆ ಬಿದ್ದ ಕಳ್ಳ । ಸದನಲ್ಲಿ ಹದಿಹರೆಯದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದೇಕೆ?
ಮಹಾನಗರ (ಮೆಟ್ರೋಪಾಲಿಟನ್), ನಗರ ಪಾಲಿಕೆ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂ ಸೇರಿ ಇತರೆ ಪ್ರದೇಶಗಳಲ್ಲಿ ನ್ಯಾಯ ಬೆಲೆ ಅಂಗಡಿ ತೆರೆಯಲು ಯಾವುದು ‘ಸೂಕ್ತ ವ್ಯಾಪಾರ ಸ್ಥಳ’ ಎಂಬ ಬಗ್ಗೆ ಮಾರ್ಗಸೂಚಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ರಾಜಕಾರಣಿ. ತಾವು ಮುಸ್ಲಿಮರ ಪರ ಎಂದು ಹೇಳಿಕೊಳ್ಳುವ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಕ್ಫ್ ಬಿಲ್ ಮಂಡನೆ ವೇಳೆ ಸಂಸತ್ನಿಂದ ಹೊರಗೆ ಹೋದರು.
ವಿಧಾನಸೌಧ, ವಿಕಾಸಸೌಧ ಮತ್ತು ಸುವರ್ಣಸೌಧ ಜನರ ಸಮಸ್ಯೆಗಳನ್ನು ಪರಿಹರಿಸುವ ದೇಗುಲಗಳು. ಇಲ್ಲಿಗೆ ನಮ್ಮನ್ನು ಆರಿಸಿ ಕಳುಹಿಸಿದ ಜನರ ಸಮಸ್ಯೆಗಳನ್ನು ಪರಿಹರಿಸಲು ನ್ಯಾಯಯುತವಾಗಿ ಕೆಲಸ ಮಾಡುವುದು ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೊಡಗು ಜಿಲ್ಲೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೂ ಮುನ್ನ ತಮ್ಮ ಪತ್ನಿ ಶೋಭಿತಾಗೆ ಬರೆದಿದ್ದಾರೆ ಎನ್ನಲಾದ ಭಾವುಕ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.