ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ.
ರಾಜೇಂದ್ರ ಅವರ ಹತ್ಯೆ ಸುಪಾರಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ರಾಜೇಂದ್ರ ಹತ್ಯೆಗೆ ರೌಡಿ ಶೀಟರ್ ಸೋಮು ಎಂಬಾತ ಸಂಚು ನಡೆಸಿದ್ದ ಬಗ್ಗೆ ಪ್ರಕರಣದ ಇತರ ಆರೋಪಿಗಳಾದ ರಾಕಿ ಹಾಗೂ ಪುಷ್ಪಾ ಎಂಬುವರು ಮಾತುಕತೆ ನಡೆಸಿದ್ದ 18 ನಿಮಿಷದ ಸ್ಫೋಟಕ ಆಡಿಯೋ ಬಹಿರಂಗವಾಗಿದೆ.
ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಜನರು ಹೊಸ ಪಕ್ಷ ಕಟ್ಟಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಶೀಘ್ರವೇ ರಾಜ್ಯಾದ್ಯಂತ ಸುತ್ತಾಡಿ ಜನಾಭಿಪ್ರಾಯ ಸಂಗ್ರಹಿಸಿ ಹೊಸ ಪಕ್ಷ ಕಟ್ಟುವ ಕುರಿತು ವಿಜಯದಶಮಿಗೆ ರಾಜಕೀಯ ನಿರ್ಧಾರ ಕೈಗೊಳ್ಳುವೆ’ ಎಂದು ಬಿಜೆಪಿ ಉಚ್ಚಾಟಿತ ನಾಯಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಿಸಿದ್ದಾರೆ.
ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ಹಾಗೂ ತನ್ನ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಬುಧವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟ ಆರಂಭಿಸಲಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸಂಶೋಧನಾ ಚಟುವಟಿಕೆಗಳಿಗಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದಲ್ಲಿ ಐದು ವರ್ಷಗಳಾದರೂ ಸಂಶೋಧನಾ ಚುಟವಟಿಕೆಗಳೇ ಶುರುವಾಗಿಲ್ಲ. ಇದಕ್ಕೆ ಎರಡು ಪ್ರಮುಖ ಕಾರಣಗಳು.
ನೂರನೇ ವರ್ಷದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ: ರಾಷ್ಟ್ರೀಯ ಪುನರ್ ನಿರ್ಮಾಣ ಆಂದೋಲನ ಸಾಗಿದ ಮಾರ್ಗ
ದೇಶದ ಮೂಲ ಸಮಸ್ಯೆಗೆ ಪರಿಹಾರ ಕೊಟ್ಟ ಡಾಕ್ಟರ್ಜಿ!
- ತೂತು ಒಲೆ ಕೆಡಿಸಿತು, ಮಾತು ಯತ್ನಾಳ್ ರಾಜಕೀಯ ಕೆಡಿಸಿತು । ಸಂಧಾನಕ್ಕೆ ನಡ್ಡಾ ಕರೆದಾಗ ಯತ್ನಾಳ್ ಕೊಟ್ಟ ಉತ್ತರವೇ ಮುಳುವಾಯಿತೇ?
ಪಂಡಿತ್ ಎಂ. ವೆಂಕಟೇಶ್ ಕುಮಾರ್, ಹಿರಿಯ ಕವಿ ಬಿ.ಆರ್.ಲಕ್ಷ್ಮಣರಾವ್, ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನ
ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ರಾಜಕೀಯ ಉದ್ದೇಶವಿದ್ದಿದ್ದರೆ ಮುಸುಕು ಹಾಕಿಕೊಂಡು ಗೌಪ್ಯವಾಗಿ ಭೇಟಿಯಾಗುತ್ತಿದ್ದೆವು. ಫೋಟೋ ತೆಗೆಸಿಕೊಂಡು ಮಾಧ್ಯಮಗಳ ಜತೆಗೆ ಹಂಚಿಕೊಳ್ಳುತ್ತಿರಲಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ