ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಮಲ ಮಗಳು ಹಾಗೂ ನಟಿ ರನ್ಯಾರಾವ್ ಶಿಷ್ಟಾಚಾರ ಸೌಲಭ್ಯ(ಪ್ರೋಟೋಕಾಲ್) ಪಡೆದಿರುವುದು ಡಿಜಿಪಿ ರಾಮಚಂದ್ರರಾವ್ ಅವರ ಅರಿವಿಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗಬೇಕು ಎಂಬ ಹೋರಾಟ ಮುಂದುವರೆಸಲು ನಿರ್ಧರಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು, ಯತ್ನಾಳ್ ಅವರ ಉಚ್ಚಾಟನೆಯನ್ನು ಹಿಂಪಡೆಯುವಂತೆ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.
ಬರೋಬ್ಬರಿ 17 ವರ್ಷಗಳ ಬಳಿಕ ಚೆನ್ನೈ ಕ್ರೀಡಾಂಗಣದಲ್ಲಿ ಆರ್ಸಿಬಿ ಗೆಲುವಿನ ನಗೆ ಬೀರಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 50 ರನ್ ಗೆಲುವು ಸಾಧಿಸಿತು.
ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ...ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾ ಜನನಾಯಕನ್ ತೆರೆಕಾಣುತ್ತಿರುತ್ತದೆ
ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿಯ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.
ಐಪಿಎಲ್ನ ಅತಿ ದೊಡ್ಡ ಹಾಗೂ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ, ಸಾಂಪ್ರದಾಯಿಕ ಎದುರಾಳಿಗಳಾದ ಆರ್ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೆಜ್ ಪಂದ್ಯ ಶುಕ್ರವಾರ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್ ಪಕ್ಷವು, ಲಿಬರಲ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕನ್ನಡಿಗ ಚಂದ್ರ ಆರ್ಯ ಅವರಿಗೆ ನಿಷೇಧ ಹೇರಿದೆ.
ಈಗಾಗಲೇ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ವೇಳೆ ಹೊಸ ಶಾಕ್ ನೀಡಿದೆ. ಎಲ್ಲಾ ಮಾದರಿಯ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್ಗೆ ನಾಲ್ಕು ರು. ಹೆಚ್ಚಳ ಮಾಡಿದೆ. ಈ ದರ ಹೆಚ್ಚಳ ಏ.1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿ ಎಂಟು ವಿಧೇಯಕಗಳಿಗೆ ಕೆಂಪು ನಿಶಾನೆ ತೋರಿಸಿದ ಬೆನ್ನಲ್ಲೇ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ಮರಳಿಸಿರುವುದು ಬೆಳಕಿಗೆ ಬಂದಿದೆ.