ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ಶುಕ್ರವಾರ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಗುರುವಾರ ಸರ್ಕಾರಕ್ಕೆ ಸಲ್ಲಿಸಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಡಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆದೇಶದ ಸುದ್ದಿ ಅವರ ಬಣದ ಮುಖಂಡರಿಗೆ ಬರಸಿಡಿಲಿನಂತೆ ಅಪ್ಪಳಿಸಿದ್ದು, ನಿರಾಸೆಯ ಛಾಯೆ ಆವರಿಸುವಂತೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹನಿಟ್ರ್ಯಾಪ್ ಆಗಿರುವ ಅನುಮಾನವಿದೆ. ತನಿಖೆಯಾದರೆ ತಮ್ಮದೂ ಎಲ್ಲಿ ಆಚೆ ಬರುತ್ತದೋ ಎಂಬ ಭಯ ಅವರಿಗೆ ಕಾಡುತ್ತಿರಬೇಕು. ಅದಕ್ಕಾಗಿ ಅವರು ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಸೂಚಿಸುತ್ತಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ
ಶೋಕಾಸ್ ನೋಟಿಸ್ಗೆ ನಿಗದಿತ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸುತ್ತೇನೆ ಎಂದೂ ಹೇಳಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಶೀಘ್ರದಲ್ಲೇ ಸಿಎಂ ಆಗುವ ಭಾಗ್ಯ ಇದೆ ಎಂದು ಹಾಲುಮತದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.
ನಾನು ಯಾರ ಒತ್ತಡಕ್ಕೂ ಮಣಿದು ಕೆಲಸ ಮಾಡುವುದಿಲ್ಲ. ಶಾಸಕರ ಅಮಾನತಿನ ನಿರ್ಧಾರ ನಿಯಮದಂತೆ ಮಾಡಲಾಗಿದೆ. ಇದು ಅವರ ಮೇಲೆ ಯಾವುದೇ ಕೋಪ, ದ್ವೇಷದಿಂದ ತೆಗೆದುಕೊಂಡ ನಿರ್ಧಾರವಲ್ಲ.
ಸತೀಶ್ ಜಾರಕಿಹೊಳಿ ಅವರು ಯಾವ ಕಾರಣಕ್ಕೆ ಕುಮಾರಸ್ವಾಮಿ, ದೇವೇಗೌಡರನ್ನು ಭೇಟಿ ಮಾಡಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಇದು ಸತ್ಯವಂತರಿಗೆ ಕಾಲವಲ್ಲ’ ಎಂದು ಪುರಂದರದಾಸರ ಕೀರ್ತನೆ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.