ರಾಜಕಾರಣ ಸಂಪೂರ್ಣ ಕಲುಷಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನಂತೆ ಇನ್ನೂ ಅನೇಕರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಯೋಚನೆ ಮಾಡಿದ್ದಾರೆ
ಆಯುರ್ವೇದ ಔಷಧಿ, ತೈಲ ವ್ಯಾಪಾರಕ್ಕೆಂದು ಪಶ್ಚಿಮ ಆಫ್ರಿಕಾದ ಗಬಾನ್ ದೇಶಕ್ಕೆ ತೆರಳಿದ್ದ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ 21 ಮಂದಿಯನ್ನು ನಕಲಿ ವೀಸಾ ಆರೋಪದಡಿ ಬಂಧಿಸಲಾಗಿದೆ.
ಅಮೆರಿಕದ ಸ್ಯಾನ್ ಓಸೆ ನಗರದಲ್ಲಿ ಜು.3 ರಿಂದ 5 ರ ವರೆಗೆ ನಡೆಯಲಿರುವ 18 ನೇ ವಿಶ್ವ ಒಕ್ಕಲಿಗರ ಸಮ್ಮೇಳನದ ಸಿದ್ಧತೆಗಳು ಭರದಿಂದ ಸಾಗಿವೆ.
ರಾಜ್ಯದ ಒಂಬತ್ತು ಹೊಸ ವಿವಿಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಹಂತ ಹಂತವಾಗಿ ಅವುಗಳ ಸಾಮರ್ಥ್ಯವೃದ್ಧಿ ಮತ್ತು ಬಲವರ್ಧನೆಗೆ ದೃಢ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ ವೇದಿಕೆ(ಎಫ್ವಿಸಿಕೆ) ವಿನಂತಿಸಿದೆ.
ತಮ್ಮ ಮಗನನ್ನು ಸುಪರ್ದಿಗೆ ಪಡೆಯಲು ತಂದೆಯೊಬ್ಬರು ಹೆತ್ತ ತಾಯಿ ಮತ್ತು ಒಡಹುಟ್ಟಿದ ಸಹೋದರಿಯೊಂದಿಗೆ ದಶಕದಿಂದ ನಡೆಸುತ್ತಿದ್ದ ಕಾನೂನು ಹೋರಾಟಕ್ಕೆ ಹೈಕೋರ್ಟ್ ತೆರೆ ಎಳೆದಿದೆ.
ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಜೋರಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸಿದ್ದು, ಹನಿಟ್ರ್ಯಾಪ್ ದೂರು ಬಂದರೆ ತನಿಖೆ ನಡೆಸಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಇನ್ನೂ ಎರಡು ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕೆಎಂಎಫ್ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಪಟ್ಟ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಭೆ ನಡೆಸಲಿದ್ದು, ಹಾಲು ದರ ಹೆಚ್ಚಳದ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಹ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಿಂದಿನ ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಸಚಿವರಿಗೆ ಆರೆಸ್ಸೆಸ್ ಸ್ವಯಂ ಸೇವಕರನ್ನು ಆಪ್ತ ಸಹಾಯಕರನ್ನಾಗಿ (ಪಿಎ) ನೇಮಿಸುವಂತೆ ನಾವು ಯಾರಿಗೂ ಹೇಳಿಲ್ಲ ಸಂಘದ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.