ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪಕ್ಷ ಯಾವುದೇ ಇರಲಿ ಒಬ್ಬ ಮನುಷ್ಯನಿಗೆ ನೀಡುವ ಕಿರುಕುಳಕ್ಕೂ ಒಂದು ಮಿತಿ ಇರಬೇಕು ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಭಾರತೀಯ ವಾಯುಸೇನೆಯ (ಐಎಎಫ್) ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಬೈಯಪ್ಪನಹಳ್ಳಿ ಠಾಣಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ - 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಕೆಪಿಎಸ್ಸಿ ಅವಕಾಶ ಕಲ್ಪಿಸಿದೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಸಂಬಂಧ ಅಭಿಯೋಜನೆಗೆ (ಪ್ರಾಸಿಕ್ಯೂಷನ್) ಅನುಮತಿ ನೀಡಿಕೆ ವಿಚಾರವಾಗಿ ರಾಜ್ಯಪಾಲರು ಹಾಗೂ ಲೋಕಾಯುಕ್ತ ಪೊಲೀಸರ ಮಧ್ಯೆ ಹಗ್ಗಾಜಗ್ಗಾಟ ಮುಂದುವರೆದಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದ ಬಂಧಿತ ಆರೋಪಿ, ಡಿಜಿಪಿ ಅವರ ಮಲ ಮಗಳು ರನ್ಯಾ ರಾವ್ ಹಾಗೂ ಆಕೆಯ ಇಬ್ಬರು ಸ್ನೇಹಿತರ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ)ವು ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ಕಳ್ಳ ಸಾಗಣೆ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಕಾಫಿಪೊಸಾ) ಪ್ರಯೋಗಿಸಿದೆ.
ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪಹಲ್ಗಾಂ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಸಲುವಾಗಿ ಹಿಂದೂ-ಮುಸ್ಲಿಂ ವಿಷಯ ಚರ್ಚೆಗೆ ತರಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ಖಂಡನೀಯ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ ಮಳೆ ಮತ್ತೆ ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.
ಸಾಯಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ನ ಸ್ಥಾಪಕ ಮಧುಸೂದನ್ ಸಾಯಿ ಅವರಿಗೆ ಫಿಜಿ ದೇಶ ತನ್ನ ಅತ್ಯುಚ್ಚ ನಾಗರಿಕ ಪ್ರಶಸ್ತಿ ‘ಕಂಪ್ಯಾನಿಯರ್ ಆಫ್ ದಿ ಆರ್ಡರ್ ಆಫ್ ಫಿಜಿ’ ನೀಡಿ ಪುರಸ್ಕರಿಸಿದೆ.