ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.
ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.
ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾಗೆ ಇಲ್ಲಿ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನ ಮಂಜೂರು ಮಾಡಿದೆ
ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್ 18ನೇ ಆವೃತ್ತಿಯಲ್ಲಿ ಆಟಗಾರರು ಚೆಂಡಿಗೆ ಎಂಜಲು ಹಾಕಲು ಅವಕಾಶ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ.
ಐಪಿಎಲ್ 18ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಲ್ಲೂ ಟಿ20 ಹಬ್ಬದ ಜ್ವರ ಆವರಿಸಿದೆ.
ಕೇಂದ್ರಕ್ಕೆ ನೀಟ್ ನಡೆಸುವ ಸಾಮರ್ಥ್ಯವೇ ಇಲ್ಲ! -ಈ ಬಾರಿಯೂ ಸರಿಯಾಗಿ ಪರೀಕ್ಷೆ ನಡೆಯದಿದ್ದರೆ ಆಕ್ರೋಶ ವ್ಯಕ್ತ । ನನಗೆ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಹುಚ್ಚು ಹಂಬಲಗಳಿಲ್ಲ: ಡಾ। ಶರಣ ಪ್ರಕಾಶ್ ಡಾ.ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ
ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ 2025-26ನೇ ಶೈಕ್ಷಣಿಕ ಸಾಲಿನಿಂದ ವಾರದಲ್ಲಿ ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಶಿಕ್ಷಣ ಬೋಧನೆಯನ್ನು ಕಡ್ಡಾಯವಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಜಿಲ್ಲೆಯಲ್ಲಿ ಮತ್ತೆ ಗರಿಷ್ಠ ತಾಪಮಾನ ಬುಧವಾರ ದಾಖಲಾಗಿದೆ. 42.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ತಾಪಮಾನವಾಗಿದೆ.
ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್ ಕರೆಗೆ ಹಲವಾರು ಸಂಘಟನೆಗಳು ಬೆಂಬಲಿಸಿದ್ದರೆ ಇನ್ನು ಕೆಲವು ಸಂಘಟನೆಗಳು ನಿರಾಸಕ್ತಿ ತೋರಿವೆ.