ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ ನೀಡಿದ ಯೋಜನೆ । ತಂತ್ರಾಂಶಗಳ ಸಂಯೋಜನೆಯಿಂದ ಅಕ್ರಮಗಳಿಗೆ ತಡೆ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಸಂಚಾರ ದಟ್ಟಣೆ ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ಏಟ್ರಿಯಾ ಹೋಟೆಲ್ ಮಾಲೀಲಿಕರ ಮೊಮ್ಮಗ ತರುಣ್ ರಾಜ್ಗೂ ಚಲನಚಿತ್ರರಂಗದ ನಂಟಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಚಿನ್ನ ಕಳ್ಳ ಸಾಗಣೆ ಜಾಲದಲ್ಲಿ ಸಿನಿಮಾ ನಟ-ನಟಿಯರು ಕೊರಿಯರ್ಗಳಾಗಿ ಬಳಕೆಯಾಗಿರುವ ಮಾತಿಗೆ ಪುಷ್ಟಿ ಸಿಕ್ಕಂತಾಗಿದೆ.
ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾರಾವ್ಗೂ, ಮುಂಬೈನಲ್ಲಿ ಬಂಧಿತರಾಗಿರುವ ವಿದೇಶದ ಇಬ್ಬರು ವ್ಯಕ್ತಿಗಳಿಗೂ ನಂಟಿದೆ ಎಂಬ ಅಂಶವನ್ನು ಡಿಆರ್ಐ ಬಯಲು ಮಾಡಿದೆ.
ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ತಮ್ಮ ಮಲ ಮಗಳಿಗೆ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿದು ಬಂದಿದೆ.
ದುಬೈ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು 14.2 ಕೆ.ಜಿ. ಚಿನ್ನ ತಂದು ಕೊಟ್ಟು ಸಾಗಿಸುವ ಟಾಸ್ಕ್ ಕೊಟ್ಟಿದ್ದರು. ಆಗ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಕೂತು ಯೂಟ್ಯೂಬ್ ನೋಡಿ ಚಿನ್ನವನ್ನು ದೇಹದಲ್ಲಿ ಅಡಗಿಸಿಕೊಂಡು ತಂದಿದ್ದೆ’ ಎಂದು ನಟಿ ರನ್ಯಾ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಬಹುತೇಕ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಿದ್ದರು.
ರಾಜ್ಯದಲ್ಲಿ ಮಾರ್ಚ್ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ವದಂತಿ ಹಬ್ಬಿದೆ. ಆದರೆ, ಕಾಂಗ್ರೆಸ್ನ ಉನ್ನತ ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಪ್ರಕ್ರಿಯೆ ಏಪ್ರಿಲ್ ನಂತರವೇ ನಡೆಯಲಿದೆ.