ಪೊಲೀಸ್ ಇಲಾಖೆಯಲ್ಲಿ ಪುರುಷ ಅಧಿಕಾರಿ ಮತ್ತು ಸಿಬ್ಬಂದಿ ಮಾಡುವಂತಹ ಕಠಿಣ ಕೆಲಸಗಳನ್ನು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳೂ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮೆಚ್ಚುಗೆ ಸೂಚಿಸಿದ್ದಾರೆ.
ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.
ಬೆಂಗಳೂರು ಮೂಲದ ಸ್ಟಾರ್ಟ್ಅಪ್ ದಿಗಂತರ ಕಂಪನಿಯು ವಿಶ್ವದ ಮೊದಲ ಬಾಹ್ಯಾಕಾಶ ಕಣ್ಗಾವಲು (ಸರ್ವೇಕ್ಷಣಾ) ಉಪಗ್ರಹವನ್ನು ನಿಯೋಜಿಸಿದ್ದು, ಅದು ಶನಿವಾರದಿಂದ ಕಾರ್ಯನಿರ್ವಹಿಸಲು ಆರಂಭಿಸಿದೆ
ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.
ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ಲ್ಲಿ ಊಟದ ಹೊತ್ತಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲವರು ಕೊಂಡೊಯ್ದರೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಹಿನ್ನೆಲೆಯಲ್ಲಿ ಈ ಯೋಜನೆಗೆ ಒತ್ತು ನೀಡಲಾಗಿದ್ದು, ಬಜೆಟ್ನಲ್ಲಿ 42,018 ಕೋಟಿ ರು.ಮೀಸಲಿಡಲಾಗಿದೆ.
ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.
ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ತೀವ್ರ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ತಾಯಿ ಮರಣ ಶೂನ್ಯಕ್ಕೆ ಇಳಿಸುವ ಸಂಕಲ್ಪದೊಂದಿಗೆ ರಾಜ್ಯ ಬಜೆಟ್ಲ್ಲಿ 320 ಕೋಟಿ ರು. ವಿಶೇಷ ಕಾರ್ಯಕ್ರಮ