ವೀರಶೈವ ಲಿಂಗಾಯತ ಸಮುದಾಯದ ಹೆಸರಲ್ಲಿ ಸಮಾವೇಶ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಮಾವೇಶ ನಡೆಸದಂತೆ ಹಿತೈಷಿಗಳಿಗೆ ಮತ್ತು ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
: ಟಿಡಿಆರ್ ಸಂಬಂಧ ನಮ್ಮ ಕುಟುಂಬಕ್ಕೆ ₹3400 ಕೋಟಿ ನೀಡಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದೇಶವನ್ನು ಪಾಲಿಸಬೇಕಾಗಿರೋದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದ್ದಾರೆ.
ಬೇಸಿಗೆಯಲ್ಲಿ ನೀರಿನ ಕೊರತೆ ಎದುರಿಸುವವರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಬೆಂಗಳೂರು ಜಲಮಂಡಳಿ 16 ‘ಕಾವೇರಿ ಕನೆಕ್ಟ್ ಸೆಂಟರ್’ ಆರಂಭಿಸಲು ತೀರ್ಮಾನಿಸಿದೆ.
ಮಹತ್ವದ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡಗಳಲ್ಲಿ (ಎಸ್ಐಟಿ) ಕಾರ್ಯನಿರ್ವಹಿಸಿದ್ದ ಎಸ್ಪಿ ಸಿ.ಎ.ಸೈಮನ್ ಅವರಿಗೆ ವರ್ಷದಿಂದ ಹುದ್ದೆ ತೋರಿಸದೆ ಮನೆಯಲ್ಲಿ ಕುರಿಸಿರುವ ರಾಜ್ಯ ಸರ್ಕಾರದ ಕ್ರಮ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದಾಗಿ ವಿಧಿಸಿದ್ದ ಷರತ್ತನ್ನು ಸಡಿಲಿಸಿರುವ ಹೈಕೋರ್ಟ್, ದೇಶವ್ಯಾಪಿ ಹೋಗಲು ಅನುಮತಿಸಿದೆ.
ಪ್ರಸ್ತಕ ಡಬ್ಲ್ಯುಪಿಎಲ್ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡ ಸದ್ಯ ಮಾಡು ಇಲ್ಲವೇ ಮಡಿ ಪರಿಸ್ಥಿತಿಗೆ ತಲುಪಿದೆ. ಶನಿವಾರ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಪಂದ್ಯವನ್ನಾಡಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ಗೆ ಅಧಿಕೃತ ಪ್ರವೇಶ ಪಡೆದಿದೆ. ಅಫ್ಘಾನಿಸ್ತಾನ ವಿರುದ್ಧ ಶುಕ್ರವಾರದ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು.
ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿಜ್ವರದ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಮರಣ ಹೊಂದಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ.