ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಕಳವಳಕಾರಿಯಾಗಿದ್ದು, ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಬಹಳ ಮುಖ್ಯ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸೆಕೆ ಹೆಚ್ಚಾಗಿದ್ದು, ಇನ್ನೂ ಎರಡ್ಮೂರು ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬದಲಿಗೆ ಮತ್ತೊಂದು ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ
ಭೂಗತ ಜಗತ್ತಿನ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಶೂಟ್ ಔಟ್ ನಡೆದು ಐದು ದಿನಗಳಾದರೂ, ಪ್ರಕರಣ ಭೇದಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಬೇಸಿಗೆ ರಜೆ ಕಳೆಯಲು ಜಮ್ಮು-ಕಾಶ್ಮೀರದ ಪಹಲ್ಗಾಂಗೆ ರಾಜ್ಯದ ವಿವಿಧೆಡೆಯಿಂದ ತೆರಳಿದ್ದ ನೂರಾರು ಕನ್ನಡಿಗ ಕುಟುಂಬಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಆದರೆ, ದೇಶದ ಭದ್ರತೆಗೆ ಧಕ್ಕೆ ತಂದಿರುವ ವಿಚಾರದ ಕುರಿತು ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು
-ಕರ್ನಾಟಕದಲ್ಲಿ ಪರಭಾಷಿಕರ ಅಟೋಟಪಕ್ಕೆ ನಮ್ಮ ರಾಜಕಾರಣಿಗಳೇ ಕಾರಣ । ಹಿಂದಿವಾಲಾಗಳ ಮತ್ತು ಕನ್ನಡಿಗರ ನಡುವಿನ ಸಂಘರ್ಷದ ಅಂತ್ಯ: ಕರವೇ ಅಧ್ಯಕ್ಷ
ಉತ್ತರ ಭಾರತೀಯರು ಅದರಲ್ಲೂ ವಿಶೇಷವಾಗಿ ಹಿಂದಿವಾಲಾಗಳು ಕನ್ನಡಿಗರ ಮೇಲೆ ದೌರ್ಜನ್ಯ ಎಸೆಗುತ್ತಿರುವುದಷ್ಟೇ ಅಲ್ಲ, ಕನ್ನಡಿಗರನ್ನು ರಾಷ್ಟ್ರಮಟ್ಟದಲ್ಲಿ ಕೆಟ್ಟದಾಗಿ ಬಿಂಬಿಸುವ ಅತ್ಯಂತ ವ್ಯವಸ್ಥಿತ ಷಡ್ಯಂತ್ರದಲ್ಲಿ ತೊಡಗಿಕೊಂಡಿದ್ದಾರೆ.
ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.