ಮಹಿಳೆ ವಿವಸ್ತ್ರಗೊಳಿಸಿದಪ್ರಕರಣ: ಮೂವರು ಸೆರೆ

| Published : Dec 17 2023, 01:45 AM IST

ಸಾರಾಂಶ

ಬೆಳಗಾವಿ ತಾಲೂಕಿನ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಶನಿವಾರ ಕಾಕತಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬೆಳಗಾವಿ: ತಾಲೂಕಿನ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಶನಿವಾರ ಕಾಕತಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸಂತೋಷ್‌ ಬಸಪ್ಪ ನಾಯಿಕ, ಶೋಭಾ ರಾಜಪ್ಪ ನಾಯಿಕ, ಲಕ್ಕವ್ವ ಯಲ್ಲಪ್ಪ ನಾಯಿಕ ಬಂಧಿತರು. ಇವರು ಘಟನೆ ನಡೆದ ಬಳಿಕ‌ ನಾಪತ್ತೆಯಾಗಿದ್ದರು. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುವ ಈ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಮಹಿಳೆ ಹೇಳಿಕೆ ಮತ್ತು ದೂರಿನ ಪ್ರಕಾರ ಒಟ್ಟು 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮತ್ತೊಬ್ಬರು ಪರಾರಿಯಾಗಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.