5 ತಿಂಗಳಲ್ಲಿ 1 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್‌

| Published : May 28 2024, 01:48 AM IST / Updated: May 28 2024, 04:39 AM IST

ಸಾರಾಂಶ

ಸಂಚಾರ ನಿಯಮ ಉಲ್ಲಂಘನೆಯಡಿ ಸದಾಶಿವನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

 ಬೆಂಗಳೂರು :  ಸಂಚಾರ ನಿಯಮ ಉಲ್ಲಂಘನೆಯಡಿ ಸದಾಶಿವನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಸಂಚಾರ ಉಲ್ಲಂಘನೆ ಪ್ರಕರಣ ಸಂಬಂಧ ಜನವರಿಯಿಂದ ಮೇ 27ರ ಅವಧಿಯಲ್ಲಿ 1.02 ಲಕ್ಷ ಪ್ರಕರಣ ದಾಖಲಿಸಲಾಗಿದೆ. ಸದಾಶಿವನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಲವೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇವುಗಳ ಕ್ಲಿಕ್ಕಿಸುವ ಫೋಟೋಗಳ ಅಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುವುದರ ಜತೆಗೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಸಿಬ್ಬಂದಿ ಕೊರತೆಯಿಂದಾಗಿ ಪ್ರತಿ ವಾಹನಗಳ ಮೇಲೆ ನಿಗಾವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಹಲವೆಡೆ ಸಿಸಿ ಕ್ಯಾಮೆರಾಗಳನ್ನು ಅವಳಡಿಕೆ ಮಾಡಲಾಗಿದೆ. ಈ ಮೂಲಕ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಾಹನಗಳ ಮೇಲೆ ನಿಗಾವಹಿಸಲಾಗುತ್ತದೆ. ಸಿಸಿ ಕ್ಯಾಮೆರಾಗಳ ಮೂಲಕ ವಾಹನಗಳ ಪತ್ತೆ ಸುಲಭವಾಗುತ್ತಿದೆ. ವಾಹನಗಳ ನೋಂದಣಿ ಸಂಖ್ಯೆ ಆಧರಿಸಿ ವಾಹನಗಳ ಮಾಲೀಕರಿಗೆ ನೊಟೀಸ್‌ ಜಾರಿ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.