ಸಾರಾಂಶ
ಕಳ್ಳನನ್ನು ಬಂಧಿಸಿ 1 ದ್ವಿಚಕ್ರ ವಾಹನ ಮತ್ತು ₹14 ಲಕ್ಷ ಮೌಲ್ಯದ 179 ಗ್ರಾಂ ಚಿನ್ನಾಭರಣವನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು ದಕ್ಷಿಣ
ಕಳ್ಳನನ್ನು ಬಂಧಿಸಿ 1 ದ್ವಿಚಕ್ರ ವಾಹನ ಮತ್ತು ₹14 ಲಕ್ಷ ಮೌಲ್ಯದ 179 ಗ್ರಾಂ ಚಿನ್ನಾಭರಣವನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣಾ ಸರಹದ್ದಿನ ದೇವರಚಿಕ್ಕಹಳ್ಳಿ - ಗ್ಯಾನಪ್ಪನಹಳ್ಳಿ ರಸ್ತೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ದೂರು ದಾಖಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ಓರ್ವನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದಾಗ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ 3 ಪ್ರಕರಣ ಹಾಗೂ ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತೆ ಸಾ.ರಾ.ಫಾತಿಮಾ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತ ಕೆ.ಎಂ.ಸತೀಶ್ ನೇತೃತ್ವದಲ್ಲಿ ಬೇಗೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೃಷ್ಣಕುಮಾರ್, ಸಬ್ ಇನ್‌ಸ್ಪೆಕ್ಟರ್ ಕೃಷ್ಣಪ್ಪ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಪ್ರಕರಣ ಪತ್ತೆ ಮಾಡಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))