ಸಾರಾಂಶ
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಂತಾರಾಜ್ಯ ವಾಣಿಜ್ಯ ತೆರಿಗೆ ವಂಚಕರ ದೊಡ್ಡ ಜಾಲವನ್ನು ಪತ್ತೆ ಹೆಚ್ಚಿದ್ದು, ಬೋಗಸ್ ಜಿಎಸ್‌ಟಿ ನೋಂದಣಿ ಮೂಲಕ ₹180 ಕೋಟಿ ತೆರಿಗೆ ವಂಚನೆ ಪ್ರಕರಣದ ಪ್ರಮುಖ ಸೂತ್ರದಾರ ಮೊಹಮ್ಮದ್ ಸಿದ್ದಿಕ್ ಎಂಬಾತನನ್ನು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಂತಾರಾಜ್ಯ ವಾಣಿಜ್ಯ ತೆರಿಗೆ ವಂಚಕರ ದೊಡ್ಡ ಜಾಲವನ್ನು ಪತ್ತೆ ಹೆಚ್ಚಿದ್ದು, ಬೋಗಸ್ ಜಿಎಸ್‌ಟಿ ನೋಂದಣಿ ಮೂಲಕ ₹180 ಕೋಟಿ ತೆರಿಗೆ ವಂಚನೆ ಪ್ರಕರಣದ ಪ್ರಮುಖ ಸೂತ್ರದಾರ ಮೊಹಮ್ಮದ್ ಸಿದ್ದಿಕ್ ಎಂಬಾತನನ್ನು ಬಂಧಿಸಿದ್ದಾರೆ.ಕೇರಳ ರಾಜ್ಯದ ಜಿಎಸ್‌ಟಿ ಅಧಿಕಾರಿಗಳ ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರ (ಜಾಗೃತಿ) ನೇತೃತ್ವದಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಬಂಧಿತ ವ್ಯಕ್ತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೋಗಸ್ ಜಿಎಸ್‌ಟಿ ನೋಂದಣಿಗಳನ್ನು ಪಡೆದುಕೊಂಡು ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಕ್ರ್ಯಾಪ್ ವ್ಯವಹಾರ ನಡೆಸಿರುವುದು ಪತ್ತೆಯಾಗಿದೆ.
100ಕ್ಕೂ ಹೆಚ್ಚು ಅಧಿಕ ಬೋಗಸ್ ಜಿಎಸ್‌ಟಿ ನೋಂದಣಿ ಪ್ರಕರಣಗಳು ಪತ್ತೆಯಾಗಿದ್ದು, 1008 ಕೋಟಿ ನಕಲಿ ಬಿಲ್ಲುಗಳನ್ನು ಸೃಷ್ಟಿಸಿ ಸುಮಾರು ₹180 ಕೋಟಿಯನ್ನು ಕಾನೂನು ಬಾಹಿರವಾಗಿ ಹೂಡುವಳಿ ತೆರಿಗೆಯಾಗಿ ಪಡೆದುಕೊಂಡು ಸರ್ಕಾರಕ್ಕೆ ತೆರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಇಲಾಖಾ ಆಯುಕ್ತೆ ಸಿ.ಶಿಖಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಪಾರ್ಟ್‌ಮೆಂಟ್‌ಗೆ ನುಗ್ಗಿ ಚಿನ್ನ ದೋಚಿದ್ದವನ ಸೆರೆಕನ್ನಡಪ್ರಭ ವಾರ್ತೆ ಬೆಂಗಳೂರುಇತ್ತೀಚೆಗೆ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಗೃಹಿಣಿಗೆ ಜೀವ ಬೆದರಿಕೆ ಹಾಕಿ ಚಿನ್ನದ ಸರ ದೋಚಿ ಪರಾರಿಯಾಗಿದ್ದ ಕಿಡಿಗೇಡಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ಸುಮಂತ್ ಬಂಧಿತನಾಗಿದ್ದು, ಆರೋಪಿಯಿಂದ ₹2 ಲಕ್ಷ ಮೌಲ್ಯದ 35 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಆರ್.ಆರ್.ನಗರದ ರಶ್ಮಿ ರೈಸ್ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕೆಳಹಂತದಲ್ಲಿ ಲಿಫ್ಟ್‌ಗೆ ಕಾಯುತ್ತಿದ್ದ ಎಚ್.ಎಂ.ಸುವರ್ಣ ಅವರಿಗೆ ಬೆದರಿಸಿ 15 ಗ್ರಾಂ ಚಿನ್ನದ ಸರ ದೋಚಿ ಕಿಡಿಗೇಡಿ ಪರಾರಿಯಾಗಿದ್ದ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸುಮಂತ್‌ನನ್ನು ಪತ್ತೆ ಹಚ್ಚಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.ಸುಮಂತ್, ಕ್ರಿಕೆಟ್ ಬೆಟ್ಟಿಂಗ್ ಹುಚ್ಚಿಗೆ ಬಿದ್ದು ಆತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಈ ಹಣಕಾಸು ಸಮಸ್ಯೆಯಿಂದ ಪರಾಗಲು ಕೊನೆಗೆ ಅಡ್ಡದಾರಿ ತುಳಿದದ್ದ.