ಸಾರಾಂಶ
ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಮೃತಪಟ್ಟು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಮೃತಪಟ್ಟು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಚನ್ನೇನಹಳ್ಳಿ ನಿವಾಸಿ ನಾರಾಯಣಸ್ವಾಮಿ (39) ಮೃತ ದ್ವಿಚಕ್ರ ವಾಹನ ಸವಾರ. ಮತ್ತೊಂದು ದ್ವಿಚಕ್ರ ವಾಹನದ ಸವಾರ ರಾಜಕುಮಾರ್(40) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೂಲಿ ಕೆಲಸ ಮಾಡುವ ನಾರಾಯಣಸ್ವಾಮಿ ಶುಕ್ರವಾರ ಸಂಜೆ 7ರ ಸುಮಾರಿಗೆ ಚನ್ನೇನಹಳ್ಳಿ ಸಮೀಪದ ಕೆರೆ ರಸ್ತೆಯಲ್ಲಿ ಹೋಗುತ್ತಿದ್ದರು. ಅದೇ ವೇಳೆ ಎದುರುಗಡೆಯಿಂದ ಮತ್ತೊಂದು ದ್ವಿಚಕ್ರ ವಾಹನದಲ್ಲಿ ರಾಜಕುಮಾರ್ ಬರುತ್ತಿದ್ದರು. ಈ ವೇಳೆ ಇಬ್ಬರು ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ದ್ವಿಚಕ್ರ ವಾಹನಗಳ ಸಹಿತ ರಸ್ತೆಗೆ ಬಿದ್ದಿದ್ದಾರೆ.ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸವಾರರಿಬ್ಬರನ್ನೂ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ತೀವ್ರ ರಕ್ತಸ್ರಾವವಾಗಿ ನಾರಾಯಣಸ್ವಾಮಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- - -ಬೈಕ್‌ಗಳ ನಡುವೆ ಡಿಕ್ಕಿ: ಐಟಿಸಿ
ನೌಕರ ಸಾವು, ಮತ್ತೊಬ್ಬ ಗಾಯಕನ್ನಡಪ್ರಭ ವಾರ್ತೆ ಬೆಂಗಳೂರುಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರನೊಬ್ಬ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಯಲಹಂಕದ ಮೀನಕುಂಟೆ ನಿವಾಸಿ ದೇವರಾಜು(32) ಮೃತ ಸವಾರ. ಶುಕ್ರವಾರ ಬಳ್ಳಾರಿ ಮುಖ್ಯರಸ್ತೆಯ ಬಚ್ಚಹಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದೆ. ಹಿಂದಿನಿಂದ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ರಾಜೇಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೃತ ಸವಾರ ದೇವರಾಜು ಮತ್ತು ಆರೋಪಿ ರಾಜೇಶ್ ಐಟಿಸಿ ಕಂಪನಿ ಉದ್ಯೋಗಿಗಳು. ಶುಕ್ರವಾರ ಸಂಜೆ ಕೆಲಸ ಮುಗಿಸಿಕೊಂಡು ಇಬ್ಬರು ತಮ್ಮ ದ್ವಿಚಕ್ರ ವಾಹನಗಳಲ್ಲಿ ಮನೆಗೆ ಕಡೆಗೆ ಹೊರಟ್ಟಿದ್ದರು. ಮಾರ್ಗ ಮಧ್ಯೆ ಬಳ್ಳಾರಿ ಮುಖ್ಯರಸ್ತೆಯ ಬಚ್ಚಹಳ್ಳಿ ಸೇತುವೆ ಬಳಿ ದೇವರಾಜು ಮುಂದೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ರಾಜೇಶ್, ಏಕಾಏಕಿ ದೇವರಾಜು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸವಾರ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾರೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.