ಸಾರಾಂಶ
ಬೆಂಗಳೂರು : ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಸೋಮವಾರ ಪಾನಮತ್ತ ಚಾಲಕರ ವಿರುದ್ಧ 26 ಪ್ರಕರಣ ದಾಖಲಿಸಿದ್ದಾರೆ.
ನಗರದ ಸಂಚಾರ ಪೊಲೀಸರು ಸೋಮವಾರ ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಕಾರ್ಯಾಚರಣೆ ನಡೆಸಿ ಒಟ್ಟು 3,676 ಖಾಸಗಿ ಶಾಲಾ ವಾಹನಗಳ ಚಾಲಕ ತಪಾಸಣೆ ಮಾಡಿದ್ದು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 26 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜನವರಿ 23ರಂದು 3,414 ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿ 16 ಮಂದಿ ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಫೆಬ್ರವರಿ 22ರಂದು 2,059 ವಾಹನಗಳ ತಪಾಸಣೆ ನಡೆಸಿ 07 ಹಾಗೂ ಜುಲೈ 9ರಂದು 3,16 ವಾಹನಗಳ ತಪಾಸಣೆ ನಡೆಸಿ 23 ಪಾನಮತ್ತ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದರು.
ಡ್ರಂಕ್ ಆ್ಯಂಡ್ ಡ್ರೈವ್ ಬಗ್ಗೆ ಮಾಹಿತಿ ನೀಡಿ
ವಿದ್ಯಾರ್ಥಿಗಳ ರಸ್ತೆ ಸುರಕ್ಷತೆ ಸಂಚಾರ ಪೊಲೀಸರ ಆದ್ಯತೆಯಾಗಿದೆ. ಹೀಗಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಹಾಗೂ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸುರಕ್ಷತೆ ನಿಯಮಗಳ ಉಲ್ಲಂಘನೆ ಬಗ್ಗೆ ಮಾಹಿತಿ ಕಂಡು ಬಂದಲ್ಲಿ ಕೂಡಲೇ ಸಂಚಾರ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.