ಬೆತ್ತಲೆ ಕೇಸ್‌ ಸಂತ್ರಸ್ತೆಗೆ ₹5 ಲಕ್ಷ ಪರಿಹಾರ

| Published : Dec 16 2023, 02:00 AM IST

ಸಾರಾಂಶ

ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದಿರುವ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ರಾಜ್ಯ ಸರ್ಕಾರವು 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಘೋಷಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರದ ವತಿಯಿಂದ ₹5 ಲಕ್ಷ ರು. ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ವಂಟಮುರಿ ಸಂತ್ರಸ್ತ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ ₹50 ಸಾವಿರ ಪರಿಹಾರ ಕೂಡ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

---------ಡಿ.11ರಂದು ಆಕೆಯ ಮಗ ಗ್ರಾಮದ ಹುಡುಗಿಯೊಂದಿಗೆ ಓಡಿಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆಯ ಲಾಗಿತ್ತು. ಇನ್ನು, 8 ಆರೋಪಿಗಳನ್ನು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ತಲಾಶೆ ನಡೆದಿದೆ. ಹಾಗೆಯೇ, ಘಟನೆಯ ಕುರಿತು ಹೈಕೋರ್ಟ್‌ ಸಹ ಸರ್ಕಾರಕ್ಕೆ ಪ್ರಕರಣದ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ಕೇಳಿತ್ತು.