ಚಲಿಸುತ್ತಿದ್ದ ಐಷಾರಾಮಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಹಳೇ ಮದ್ರಾಸ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದ್ದು ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

 ಬೆಂಗಳೂರು : ಚಲಿಸುತ್ತಿದ್ದ ಐಷಾರಾಮಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಹಳೇ ಮದ್ರಾಸ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮಾರ್ಗ ಮಧ್ಯೆ ಹೊತ್ತಿ ಉರಿದಿದೆ

ನಿವೃತ್ತ ವೈದ್ಯರಾದ ನಾಗರಾಜ್ ಅವರು ಬೆನ್ಜ್‌ ಕಾರಿನಲ್ಲಿ ಶನಿವಾರ ಮಧ್ಯಾಹ್ನ ಇಂದಿರಾ ನಗರದಿಂದ ಬೈಯಪ್ಪನಹಳ್ಳಿ ಕಡೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಹಳೇ ಮದ್ರಾಸ್‌ ರಸ್ತೆಯಲ್ಲಿ ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಹೊಗೆ ಕಂಡು ಕೂಡಲೇ ಆತಂಕಗೊಂಡು ಕೆಳಗೆ ಇಳಿದು ನೀರು ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ

ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸಂಪೂರ್ಣ ಸುಟ್ಟು ಕರಕಲು ಆಗಿದೆ. ಕಾರಿನ ಎ.ಸಿ.ಯಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿ ಈ ಅವಘಡ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯ ವೇಳೆ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.