ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!

| N/A | Published : Feb 14 2025, 12:31 AM IST / Updated: Feb 14 2025, 04:18 AM IST

deadbody
ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!
Share this Article
  • FB
  • TW
  • Linkdin
  • Email

ಸಾರಾಂಶ

ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.

 ಪಾಂಡವಪುರ : ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.

ಗ್ರಾಮದ ಹೊರವಲಯದ ತಮ್ಮ ಜಮೀನ ಎಲೆತೋಟಕ್ಕೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ರೈತ ಹೊನ್ನೇಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಕ್ಕಪಕ್ಕದ ಜಮೀನಿನವರು ಪೊಲೀಸರಿಗೆ ವಿಷಯ ಮುಟ್ಟಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಶವಪರೀಕ್ಷೆ ನಡೆಸಿ ವಾರಸ್ಸುದಾರರಿಗೆ ಒಪ್ಪಿಸಿದರು. ಮೃತರಿಗೆ ಪತ್ನಿ ಗೀತಾ, ಒಂದು ಹೆಣ್ಣು, ಗಂಡು ಮಗುವಿದೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.