ಸಾರಾಂಶ
ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಇಮ್ಯೂನಿಯಲ್ ಜಿಡೋಜಿನ್(28) ಬಂಧಿತ. ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಅಕ್ರಮವಾಗಿ ನಗರದಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ.2015ರಲ್ಲಿ ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿಯು ಆರಂಭದಲ್ಲಿ ಮುಂಬೈಗೆ ಬಂದು ಬಳಿಕ ಬೆಂಗಳೂರಿಗೆ ಬಂದಿದ್ದಾನೆ. 2019ರಲ್ಲಿ ಈತನ ವೀಸಾ ಅವಧಿ ಮುಕ್ತಾಯವಾಗಿದ್ದರೂ ನಗರದಲ್ಲೇ ಅಕ್ರಮವಾಗಿ ನೆಲೆಸಿದ್ದ. ಆರೋಪಿಯನ್ನು ಬಂಧಿಸಿ, ಸೊಂಡೆಕೊಪ್ಪದಲ್ಲಿನ ಫಾರಿನರ್ಸ್ ರಿಸ್ಟ್ರಿಂಕ್ಷನ್ ಸೆಂಟರ್‌ನಲ್ಲಿ (ಎಫ್‌ಆರ್‌ಸಿ) ಇರಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.