ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

| Published : Apr 20 2024, 01:02 AM IST / Updated: Apr 20 2024, 06:06 AM IST

ಸಾರಾಂಶ

ಶಿವಾರಿ ಎಂಬ ಖಾಸಗಿ ಕಂಪನಿಯಲ್ಲಿ ವಿದ್ಯುತ್ ಉಪಕರಣಗಳನ್ನು ಮಾರಾಟ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ಮಧ್ಯಾಹ್ನ ಶಿವಪುರದ ಪದ್ಮಾವತಿ ಕಲ್ಯಾಣ ಮಂಟಪದ ಸಮೀಪ ಇರುವ ನಂದಿ ಲಾಡ್ಜ್ ನಲ್ಲಿ ಕೊಠಡಿಯನ್ನು ಬಾಡಿಗೆ ಪಡೆದು ತಂಗಿದ್ದರು.

  ಮದ್ದೂರು: ಖಾಸಗಿ ಕಂಪನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಶಿವಪುರದ ನಂದಿ ಲಾಡ್ಜ್ ನಲ್ಲಿ ಗುರುವಾರ ಸಂಜೆ ಜರುಗಿದೆ.

ಮಳವಳ್ಳಿ ತಾಲೂಕು ಕಿರುಗಾವಲು ಹೋಬಳಿ ಚುಂಚೇಗೌಡನ ಕೊಪ್ಪಲು ಗ್ರಾಮದ ಮಹದೇವನ ಪುತ್ರ ಟಿ.ಎಂ.ರೇವಣೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಶಿವಾರಿ ಎಂಬ ಖಾಸಗಿ ಕಂಪನಿಯಲ್ಲಿ ವಿದ್ಯುತ್ ಉಪಕರಣಗಳನ್ನು ಮಾರಾಟ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ಮಧ್ಯಾಹ್ನ ಶಿವಪುರದ ಪದ್ಮಾವತಿ ಕಲ್ಯಾಣ ಮಂಟಪದ ಸಮೀಪ ಇರುವ ನಂದಿ ಲಾಡ್ಜ್ ನಲ್ಲಿ ಕೊಠಡಿಯನ್ನು ಬಾಡಿಗೆ ಪಡೆದು ತಂಗಿದ್ದರು.

ನಂತರ ಠೇವಣೇಶ್ ತನ್ನಲ್ಲಿದ್ದ ಸೀರೆಯಿಂದ ಲಾಡ್ಜ್ ನ ಫ್ಯಾನ್ ಮೂಲಕ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ವೇಳೆಗೆ ಲಾಡ್ಜ್ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ ಠೇವಣೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು.

ಮಹದೇಶ್ವರ ಬೆಟ್ಟದಲ್ಲಿ ಗೃಹಣಿ, ಮಗು ನಾಪತ್ತೆ

ಹನೂರು: ಮಹದೇಶ್ವರ ಬೆಟ್ಟದಲ್ಲಿ ಗೃಹಿಣಿ ಮಗು ಜೊತೆ ನಾಪತ್ತೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಿಜಿ ಮೋಳೆ ಗ್ರಾಮದ ಕಾದಂಬರಿ (22)ಎಂಬಾಕೆ ತನ್ನ ಒಂದುವರೆ ವರ್ಷದ ಪುಟ್ಟ ಬಾಲಕಿ ರಚನಾ ಇಬ್ಬರು‌ ಸಹ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕಾಣೆಯಾಗಿದ್ದಾರೆ ಎಂದು ಮಹದೇಶ್ವರ ಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾದಂಬರಿಯ ಪತಿ ಪ್ರದೀಪ್ ಮಹದೇಶ್ವರ ಬೆಟ್ಟದ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ಹಾಗೂ ಮಗಳ ಜೊತೆ ಮಾದೇಶ್ವರ ಬೆಟ್ಟಕ್ಕೆ ಪೂಜೆಗೆ ಬಂದಿದ್ದೆವು ಮಹದೇಶ್ವರ ದೇವಸ್ಥಾನದ ಬಳಿ ನನ್ನ ಪತ್ನಿ ಹಾಗೂ ನನ್ನ ಮಗಳು ನಾಪತ್ತೆಯಾಗಿದ್ದಾರೆ ಇಬ್ಬರನ್ನು ಹುಡುಕಿ ಕೊಡುವಂತೆ ದೂರಿನಲ್ಲಿ ಪ್ರಸ್ತಾಪಿಸುತ್ತಾರೆ.