ಸಾರಾಂಶ
ಮಂಡ್ಯ : ಅವೈಜ್ಞಾನಿಕವಾಗಿ ರಸ್ತೆಗೆ ಹಾಕಿದ್ದ ಡುಬ್ಬ ಅಳವಡಿಕೆಯಿಂದ ಯುವಕ ಬೈಕ್‌ನಿಂದ ಬಿದ್ದು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ವಿ.ಸಿ.ಫಾರ್ಮ್ ಗೇಟ್ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.
ತಾಲೂಕಿನ ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡ ಶಂಕರಲಿಂಗೇಗೌಡರ ಪುತ್ರ ರೋಹಿತ್ ಮೃತಪಟ್ಟವರು. ಮೈಸೂರಿನ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ರೋಹಿತ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ವಿ.ಸಿ.ಫಾರ್ಮ್ ಗೇಟ್ ಬಳಿ ಈ ಘಟನೆ ಜರುಗಿದೆ.
ಅಪಘಾತ ಸಂಭವಿಸಿ 45 ನಿಮಿಷವಾದರೂ ರೋಹಿತ್ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರೂ ಯಾರು ಸಹ ತಕ್ಷಣಕ್ಕೆ ಸಹಾಯಕ್ಕೆ ಬರಲಿಲ್ಲ. ಆನಂತರ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಯುವಕರ ಗುಂಪು ರೋಹಿತ್ ನನ್ನು ನೋಡಿ ತಮ್ಮ ಕಾರಿನಲ್ಲಿ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತರುವಾಗ ಆಸ್ಪತ್ರೆ ಗೇಟ್ ಬಳಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಪರಿಚಿತ ಶವ ಪತ್ತೆ
ಮಂಡ್ಯ: ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಶಾಲೆ ಬಳಿ ತಮಿಳುನಾಡಿನ ಮೂಲದ ರಾಮದಾಸ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತನಿಗೆ ಸುಮಾರು 80-85 ವರ್ಷ ವಯಸ್ಸಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಾರಸುದಾರರಿದ್ದಲ್ಲಿ ದೂ-08232-232170 ಅಥವಾ ಮೊ-9480804869 ಅನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.