ಸಾರಾಂಶ
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸಾಲುಂಡಿ ಗ್ರಾಮದ ಬೀರಪ್ಪರ ಪುತ್ರ ರವಿಕುಮಾರ್ (18) ಮೃತಪಟ್ಟ ಯುವಕ. ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ, ರವಿಕುಮಾರ್ ಈಜಲು ನದಿಗಿಳಿದ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವುನ್ನಪ್ಪಿರುವ ಘಟನೆ ತಾಲೂಕಿನ ಬಲಮುರಿ ಪ್ರವಾಸಿ ತಾಣದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸಾಲುಂಡಿ ಗ್ರಾಮದ ಬೀರಪ್ಪರ ಪುತ್ರ ರವಿಕುಮಾರ್ (18) ಮೃತಪಟ್ಟ ಯುವಕ. ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ, ರವಿಕುಮಾರ್ ಈಜಲು ನದಿಗಿಳಿದ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ವಿಷಯ ತಿಳಿದ ಕೆಆರ್‌ಎಸ್ ಪೊಲೀಸರು ಹಾಗೂ ಅಗ್ನಿ ಶಾಮಕ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ನದಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಕೆಆರ್‌ಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿದ್ಯುತ್ ಶಾರ್ಟ್‌ಸರ್ಕ್ಯೂಟ್: ಜೆರಾಕ್ಸ್ ಯಂತ್ರ ಸುಟ್ಟು ಭಸ್ಮ
ಕನ್ನಡಪ್ರಭ ವಾರ್ತೆ ಮದ್ದೂರುವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಜೆರಾಕ್ಸ್ ಅಂಗಡಿಗೆ ಬೆಂಕಿ ಬಿದ್ದು ಕಂಪ್ಯೂಟರ್, ಜೆರಾಕ್ಸ್ ಯಂತ್ರ ಸೇರಿದಂತೆ ಹಲವಾರು ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಪಟ್ಟಣದ ತಾಲೂಕು ಕಚೇರಿ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದೆ. ತಾಲೂಕು ಪಂಚಾಯ್ತಿ ಸಮುಚ್ಚಯದ ಸಿ.ನಾಗೇಗೌಡ ಎಂಬುವರ ಮಾಲೀಕತ್ವದ ಜೆರಾಕ್ಸ್ ಅಂಗಡಿಯಲ್ಲಿ ಬೆಳಗ್ಗೆ ಆರು ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅನಾಹುತ ಸಂಭವಿಸಿದೆ. ಅಂಗಡಿಯಲ್ಲಿದ್ದ ಜೆರಾಕ್ಸ್ ಯಂತ್ರ. ಕಂಪ್ಯೂಟರ್. ಪೀಠೋಪಕರಣ ಹಾಗೂ ಸ್ಟೇಷನರಿ ವಸ್ತುಗಳು ಸುಟ್ಟು ಹೋಗಿದ್ದು ಸುಮಾರು 5 ಲಕ್ಷ ರು. ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿ ಶಿವಕುಮಾರ್ ಹಾಗೂ ಸಿಬ್ಬಂದಿ ಸಾರ್ವಜನಿಕರ ನೆರವಿನಿಂದ ಬೆಂಕಿಯನ್ನು ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಡೆಗಟ್ಟಿದ್ದಾರೆ.