ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ದಾರುಣ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ದಾರುಣ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ದಿಂಡಿಗಲ್ ತಾಲೂಕಿನ ಡೇವಿಡ್ ಸೆಂಗೋಲ್ (33) ಮೃತ ದುರ್ದೈವಿ. ಈ ಘಟನೆಯಲ್ಲಿ ಗಾಯಗೊಂಡಿರುವ ವಿಜಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೆಲಸ ಮುಗಿಸಿಕೊಂಡು ಡೇವಿಡ್ ಅವರು ಪಿಜಿಗೆ ಮರಳುವಾಗ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಿಕೆರೆಯಲ್ಲಿ ಲ್ಯಾಂಡ್ರಿಯಲ್ಲಿ ಡೇವಿಡ್ ಕೆಲಸ ಮಾಡಿಕೊಂಡಿದ್ದು, ಅಲ್ಲೇ ಸಮೀಪದ ಪಿಜಿಯಲ್ಲಿ ನೆಲೆಸಿದ್ದ. ಆತನ ಕುಟುಂಬದವರು ತಮಿಳುನಾಡಿನಲ್ಲೇ ನೆಲೆಸಿದ್ದಾರೆ. ಇನ್ನು ಝೋಮಾಟೋ ಡಿಲವರಿ ಬಾಯ್ ಆಗಿದ್ದ ವಿಜಯ್ ಸಹ ಮತ್ತಿಕೆರೆಯಲ್ಲಿ ವಾಸವಾಗಿದ್ದಾನೆ. ಕೆಲಸ ಮುಗಿಸಿಕೊಂಡು ಬುಧವಾರ ರಾತ್ರಿ 10.30ರಲ್ಲಿ ಡೇವಿಡ್ ಪಿಜಿಗೆ ಮರಳುತ್ತಿದ್ದ. ಅದೇ ವೇಳೆ ಊಟಕ್ಕೆ ಹೊರ ಬಂದಿದ್ದ ವಿಜಯ್ ಸಹ ಮನೆಗೆ ವಾಪಸ್ ಆಗುತ್ತಿದ್ದ. ಆಗ ಎಂ.ಎಸ್.ರಾಮಯ್ಯ ಆಸ್ರತ್ರೆಯ ಹಿಂಬದಿ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಡೇವಿಡ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
