ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಶ್ರೀರಂಗಪಟ್ಟಣ ಮೂಲದ ಚಾಲಕ ಸೇರಿದಂತೆ ಓರ್ವ ಗೃಹಿಣಿ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿರುವ ಮದ್ದೂರು ಘಟನೆ ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನ ಎಕ್ಸಿಟ್ ತಿರುವಿನಲ್ಲಿ ಜರುಗಿದೆ.

ಮದ್ದೂರು:

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಶ್ರೀರಂಗಪಟ್ಟಣ ಮೂಲದ ಚಾಲಕ ಸೇರಿದಂತೆ ಓರ್ವ ಗೃಹಿಣಿ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನ ಎಕ್ಸಿಟ್ ತಿರುವಿನಲ್ಲಿ ಗುರುವಾರ ಸಂಜೆ ಜರುಗಿದೆ.

ಕಾರು ಚಾಲನೆ ಮಾಡುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಪಿ.ಹೊಸಹಳ್ಳಿಯ ಕಿರಣ್ 24 ಹಾಗೂ ಇದೇ ಗ್ರಾಮದ ಗೌತಮ್ ಪತ್ನಿ ರಂಜಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಂಜಿತಾ ತಮ್ಮ ಚೆವರ್ಲೆಟ್ ಕಾರಿನಲ್ಲಿ ಬೆಂಗಳೂರಿನ ತನ್ನ ತಾಯಿ ಮನೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಹೆದ್ದಾರಿಯ ಎಕ್ಸಿಟ್ ಪಾಯಿಂಟ್‌ನಲ್ಲಿ ಕಾರಿನ ಹಿಂಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಹಿಂದೆ ಬರುತ್ತಿದ್ದ ಬೇರೆ ವಾಹನಗಳ ಚಾಲಕರು ಚಾಲಕ ಕಿರಣ್ ಗಮನಕ್ಕೆ ತಂದಿದ್ದಾರೆ. ತಕ್ಷಣ ರಂಜಿತಾ ಮತ್ತು ಕಿರಣ್ ಕಾರಿನಿಂದ ಇಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ತಂಡ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.