ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟಿ ಪವಿತ್ರಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲಾಗಿದೆ.

16 ಕೈದಿಗಳಿರುವ ಬ್ಯಾರಕ್‌ಗೆ ವರ್ಗಾವಣೆ

ಪವಿತ್ರಗೌಡ ಅವರನ್ನು ಇಬ್ಬರು ಕೈದಿಗಳು ಇದ್ದ ಬ್ಯಾರಕ್‌ನಿಂದ 16 ಕೈದಿಗಳಿರುವ ಬ್ಯಾರಕ್‌ಗೆ ವರ್ಗಾವಣೆ ಮಾಡಲಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕೈದಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.

ಪ್ರಜ್ವಲ್‌ರ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.


ದರ್ಶನ್‌ ಬ್ಯಾರಕ್‌ ಬಳಿ ಹೆಚ್ಚಿನ ಭದ್ರತೆ:

ರೇಣುಕಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾಗಿರುವ ಪ್ರದೂಷ್‌ ಮಾಫಿ ಸಾಕ್ಷಿ ಆಗಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಹಿನ್ನೆಯಲ್ಲಿ ಕೊಲೆ ಪ್ರಕರಣದ ಆರೋಪಿ ಹಾಗೂ ನಟ ದರ್ಶನ್‌ ಬ್ಯಾರಕ್‌ ಬಳಿ ಹಾಗೂ ಪ್ರದೂಷ್‌ ಬ್ಯಾರಕ್‌ ಬಳಿ ಹೆಚ್ಚಿನ ಭದ್ರತೆ ವಹಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇರಿಸಲಾಗಿದೆ.