ಸಾರಾಂಶ
ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಪ್ರಕಟಿಸಲಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಪ್ರಕಟಿಸಲಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಈ ನಾಲ್ವರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ಸಂಬಂಧ ಬುಧವಾರ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಜೈಶಂಕರ್ ತೀರ್ಪು ಕಾಯ್ದಿರಿಸಿದ್ದಾರೆ.
ಸೆ.2ಕ್ಕೆ ಕೇಶವಮೂರ್ತಿ, ವಿನಯ್ ಅರ್ಜಿ ತೀರ್ಪು
ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್ ಅವರು, ರೇವಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡುವವರೆಗೂ ನಡೆದಿರುವ ಎಲ್ಲ ಬೆಳವಣಿಗೆಗಳ ಕುರಿತು ನ್ಯಾಯಾಲಯಕ್ಕೆ ಸಂಪೂರ್ಣ ಮಾಹಿತಿ ನೀಡಿದರು.
ಆರೋಪಿಗಳ ಪರ ವಕೀಲರು, ಅರ್ಜಿದಾರರು ಅಪಹರಣ ಮತ್ತು ಕೊಲೆ ಪ್ರಕರಣ ಸಂಚಿನಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ಧದ ಸಾಕ್ಷ್ಯಾಧಾರಗಳು ಇಲ್ಲವಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
;Resize=(690,390))
)
;Resize=(128,128))
;Resize=(128,128))
;Resize=(128,128))
;Resize=(128,128))