ನೃತ್ಯದ ವೇಳೆ ಮೈತಾಕಿದ್ದಕ್ಕೆ ಹತ್ಯೆ ಮಾಡಿದ ನಾಲ್ವರ ಸೆರೆ

| Published : Mar 12 2024, 02:03 AM IST

ಸಾರಾಂಶ

ಶಿವರಾತ್ರಿ ವೇಳೆ ನೃತ್ಯ ಮಾಡುವಾಗ ಮೈ ತಾಕಿದ್ದಕ್ಕೆ ಯುವಕನ ಇರಿದು ಹತ್ಯೆ ಮಾಡಿದ್ದ ಅಪ್ತಾಪ್ತ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಶಿವರಾತ್ರಿ ಹಬ್ಬದ ಉತ್ಸವದಲ್ಲಿ ನೃತ್ಯ ಮಾಡುವ ವಿಚಾರಕ್ಕೆ ನಡೆದಿದ್ದ ಯುವಕನ ಕೊಲೆ ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಿರಿನಗರ ನಿವಾಸಿಗಳಾದ ಚೇತನ್‌, ರಂಗ, ಪವನ್ ಹಾಗೂ ಅಪ್ರಾಪ್ತ ಬಾಲಕ ಬಂಧಿತನಾಗಿದ್ದು, ಶಿವರಾತ್ರಿ ಹಬ್ಬದ ಶುಕ್ರವಾರ ರಾತ್ರಿ ಶ್ರೀನಗರ ನಿವಾಸಿ ಯೋಗೇಶ್ ಕುಮಾರ್‌ (23) ಎಂಬಾತನಿಗೆ ಚಾಕುವಿನಿಂದ ಇರಿದು ಆರೋಪಿಗಳು ಹತ್ಯೆಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯೋಗೇಶ್ ಮಂಡ್ಯ ಜಿಲ್ಲೆ ಕೊಪ್ಪದವನಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ವಾಹನ ಸರ್ವೀಸ್ ಸೆಂಟರ್‌ನಲ್ಲಿ ಕೆಲಸ ಮಾಡಿಕೊಂಡು ಶ್ರೀನಗರದಲ್ಲಿ ನೆಲೆಸಿದ್ದ. ಶಿವರಾತ್ರಿ ಹಬ್ಬದ ನಿಮಿತ್ತ ಮುನೇಶ್ವರ ಬ್ಲಾಕ್‌ನಲ್ಲಿದ್ದ ದೇವಾಲಯಕ್ಕೆ1.30ರ ಸುಮಾರಿಗೆ ರಾತ್ರಿ ಆತ ತೆರಳಿದ್ದ. ಆ ವೇಳೆ ಉತ್ಸವದಲ್ಲಿ ತಮಟೆ ಶಬ್ದಕ್ಕೆ ಕುಣಿಯುವಾಗ ಯೋಗೇಶ್ ಹಾಗೂ ಆರೋಪಿಗಳ ನಡುವೆ ಮೈ ತಾಕಿದ ವಿಚಾರಕ್ಕೆ ಜಗಳವಾಗಿದೆ. ಇದರಿಂದ ಕೆರಳಿದ ಆೋಪಿಗಳು, ಯೋಗೇಶ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಘಟನೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಮೆಂಟ್‌ ಮಿಕ್ಸರ್‌ ಲಾರಿ ಡಿಕ್ಕಿ ಆಗಿ ಬೈಕ್‌ ಸವಾರ ಸಾವುಕನ್ನಡಪ್ರಭ ವಾರ್ತೆ ಬೆಂಗಳೂರುಸಿಮೆಂಟ್‌ ಮಿಕ್ಸರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಟ್ಟಂದೂರು ಅಗ್ರಹಾರ ನಿವಾಸಿ ದೇವ್‌ ಸುಂದರ್‌ ಯಾದವ್‌(55) ಮೃತ ಸವಾರ.ಬಿಹಾರ ಮೂಲದ ದೇವ್‌ ಸುಂದರ್‌ ಯಾದವ್‌ ಹೋಟೆಲ್‌ವೊಂದರಲ್ಲಿ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ವರ್ತೂರು ಕೋಡಿ ಬಳಿ ತೆರಳುವಾಗ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್‌ ಮಿಕ್ಸರ್‌ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸವಾರ ದೇವ್‌ ಸುಂದರ್‌ ಯಾದವ್‌ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.ಘಟನೆ ಬಳಿಕ ಸಿಮೆಂಟ್‌ ಮಿಕ್ಸರ್ ಲಾರಿ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಅದರ ಚಾಲಕನ ಪತ್ತೆಗೆ ಶೋಧಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.