ಸಾರಾಂಶ
ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಮೌಲಾಲಿ ಅಲಿಯಾಸ್ ಮೊಹಮದ್ ಅಲಿ(19) ಮತ್ತು ಮುತ್ತಮ್ಮ ಲೇಔಟ್ ನಿವಾಸಿ ಮೊಹಮದ್ ಜುನೈದ್(19) ಬಂಧಿತರು. ಅರೋಪಿಗಳಿಂದ ಒಂದು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಬೆನ್ನಿಗಾನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಅಜಮ್ ಅಹಮದ್ ಕಳೆದ ಫೆ.5ರ ರಾತ್ರಿ ಸುಮಾರು 9.30ಕ್ಕೆ ಬಾಣಸವಾಡಿಯ ನೂರಡಿ ರಸ್ತೆಯ ಕಾಫಿ ಬ್ರೇವರಿ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಅಜಮ್ ಅಹಮದ್‌ನನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.