ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ : ಕಬ್ಬನ್‌ ಪಾರ್ಕಲ್ಲಿ ವ್ಯಕ್ತಿಯೊಬ್ಬನ ಸೆರೆ

| Published : Sep 07 2024, 01:38 AM IST / Updated: Sep 07 2024, 04:12 AM IST

ಸಾರಾಂಶ

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಕಬ್ಬನ್‌ಪಾರ್ಕ್‌ ಠಾಣೆ ಪೊಲೀಸರು ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

 ಬೆಂಗಳೂರು :  ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಕಬ್ಬನ್‌ಪಾರ್ಕ್‌ ಠಾಣೆ ಪೊಲೀಸರು ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯನ್ನು ಫಯಾಜ್‌ ಪಾಷಾ (57) ಎಂದು ಗುರುತಿಸಲಾಗಿದೆ. ಇದೇ ತಿಂಗಳು 2ರಂದು ಯುವತಿ ವಾಯು ವಿಹಾರಕ್ಕೆ ಕಬ್ಬನ್‌ಪಾರ್ಕ್‌ಗೆ ಬಂದಿದ್ದರು. ಈ ವೇಳೆ ಕೇಂದ್ರ ಗ್ರಂಥಾಲಯದ ಬಳಿ ಆರೋಪಿ ಯುವತಿ ಬಳಿ ಬಂದು ಅನುಚಿತವಾಗಿ ವರ್ತಿಸಿದ್ದಾನೆ. ತಕ್ಷಣ ಯುವತಿ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಮಾಹಿತಿ ಮೇರೆಗೆ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಬಳಿಕ ಯುವತಿಯ ದೂರಿನನ್ವಯ ಆರೋಪಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ವಾಯುವಿಹಾರಕ್ಕೆ ಬರುವ ಮಹಿಳೆಯರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.