ಸಾರಾಂಶ
ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರ ವ್ಯಾಪ್ತಿಯ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.ಐದು ತಿಂಗಳ ಅವಧಿಯಲ್ಲಿ ನಗರ ವ್ಯಾಪ್ತಿ 11 ಕಡೆಯಲ್ಲಿ ಈ ಜಂಟಿ ದಾಳಿ ನಡೆದಿದ್ದು, ಈ ವೇಳೆ 14 ರಿಂದ 17 ವರ್ಷ ವಯಸ್ಸಿನ 12 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ. ಸಂತ್ರಸ್ತ ಬಾಲಕಿಯರಲ್ಲಿ ವಿದೇಶದ ಮಕ್ಕಳು ಸೇರಿದ್ದಾರೆ.
ಅಲ್ಲದೆ 26 ಮಂದಿ ಪಿಂಪ್‌ಗಳು ಹಾಗೂ ಐವರು ಗ್ರಾಹಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಬಾಲಕಿಯರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರದ ಸುಪರ್ದಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಾಕ್ಸ್... (ಫೋನ್ ನಂ. ಹೈಲೈಟ್ ಮಾಡಿ)
ವೇಶ್ಯಾವಾಟಿಕೆಮಾಹಿತಿ ನೀಡಿ
ನಗರದಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಇದ್ದರೆ ಪೊಲೀಸರಿಗೆ ನೀಡುವಂತೆ ಸಾರ್ವಜನಿಕರಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮನವಿ ಮಾಡಿದ್ದಾರೆ.ಈ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿ-112, ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ನಗರದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಹಕರಿಸಬೇಕೆಂದು ಆಯುಕ್ತರು ಕೋರಿದ್ದಾರೆ.