ಸಾರಾಂಶ
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಜತೆ ಆಟೋ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಜತೆ ಆಟೋ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ಸಮೀಪ ಈ ಕೃತ್ಯ ನಡೆದಿದ್ದು, ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುವ ಸಂತ್ರಸ್ತೆ, ಪಾರ್ಲರ್‌ನಿಂದ ಮಧ್ಯಾಹ್ನ ಮನೆಗೆ ತೆರಳುವಾಗ ಮಾರ್ಗ ಮಧ್ಯೆ ಆಟೋ ಚಾಲಕ ಹಿಂಬಾಲಿಸಿದ್ದಾನೆ. ಆಗ ಸಂತ್ರಸ್ತೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ಆರೋಪಿ ವರ್ತಿಸಿದ್ದಾನೆ. ಕೂಡಲೇ ಆತನ ಮೇಲೆ ಚಪ್ಪಲಿ ಎಸೆದು ರಕ್ಷಣೆಗೆ ಜೋರಾಗಿ ಸಂತ್ರಸ್ತೆ ಕೂಗಿಕೊಂಡಾಗ ಆತ ಕಾಲ್ಕಿತ್ತಿದ್ದಾನೆ ಎಂದು ತಿಳಿದು ಬಂದಿದೆ.