ಸಾರಾಂಶ
ಬೆಂಗಳೂರು : ತನ್ನ ಹಾಡಿನಲ್ಲಿ ಲಿಂಗಾಯಿತ ಸಮುದಾಯದ ಕುರಿತು ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ರ್‍ಯಾಪರ್ ಕರಣ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಗಳೂರು ಘಟಕದ ಪದಾಧಿಕಾರಿಗಳು ಬುಧವಾರ ದೂರು ದಾಖಲಿಸಿದ್ದಾರೆ.
ಸದಾಶಿವನಗರದ ಠಾಣೆಯಲ್ಲಿ ಶೇಷಾದ್ರಿಪುರ ಉಪ ವಿಭಾಗದ ಎಸಿಪಿ ಪ್ರಕಾಶ್ ರೆಡ್ಡಿ ಅವರನ್ನು ಭೇಟಿಯಾಗಿ ವೀರಶೈವ ಮಹಾಸಭಾದ ನಾಯಕರು ದೂರು ಸಲ್ಲಿಸಿದರು.
ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ ಲೋಡ್ ಮಾಡಿರುವ ರ್ಯಾಂಪ್ ಹಾಡಿನಲ್ಲಿ ಲಿಂಗಾಯಿತ ಸಮುದಾಯಕ್ಕೆ ಕುರಿತು ಅವಹೇಳನಕಾರಿ ಪದ ಬಳಕ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕರಣ್ ಹಂಚಿಕೊಂಡಿದ್ದಾನೆ. ಇದರಿಂದ ಸಮುದಾಯಕ್ಕೆ ಮುಜುಗರ ಉಂಟಾಗಿದೆ. ಈ ಕೂಡಲೇ ಕರಣ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ ಯೂಟ್ಯೂಬ್‌ನಲ್ಲಿ ಆ ಹಾಡನ್ನು ನಿರ್ಬಂಧಿಸಬೇಕು ಎಂದು ವೀರಶೈವ ಮಹಾಸಭಾ ನಾಯಕರು ಒತ್ತಾಯಿಸಿದ್ದಾರೆ.
ಈ ವೇಳೆ ವೀರಶೈವ ಮಹಾಸಭಾ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಕುಮಾರ್ ಹಾಗೂ ಮುಖಂಡ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.