ಬೆಂಗಳೂರು : ವಿಶ್ವೇಶ್ವರ ಲೇಔಟಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ ಬಿಡಿಎಯಿಂದ ತೆರವು

| N/A | Published : Apr 05 2025, 01:49 AM IST / Updated: Apr 05 2025, 04:24 AM IST

ಸಾರಾಂಶ

ನಗರದ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯ ಆಸ್ತಿಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ತೆರವುಗೊಳಿಸಿ ಸುಮಾರು 24 ಕೋಟಿ ರು.ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ವಶಕ್ಕೆ ಪಡೆದುಕೊಂಡಿದೆ.

  ಬೆಂಗಳೂರು :  ನಗರದ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯ ಆಸ್ತಿಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ತೆರವುಗೊಳಿಸಿ ಸುಮಾರು 24 ಕೋಟಿ ರು.ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಗಿಡದಕೊನೇನಹಳ್ಳಿ ಗ್ರಾಮದ ಸರ್ವೆ ನಂ.51ರಲ್ಲಿದ್ದ 12 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ಶೆಡ್‌ಗಳನ್ನು ನಿರ್ಮಿಸಲಾಗಿತ್ತು. ಹಲವು ಬಾರಿ ನೋಟಿಸ್‌ ಕೊಟ್ಟು ತೆರವಿಗೆ ಸೂಚಿಸಿದ್ದರೂ ತೆರವು ಮಾಡಿರಲಿಲ್ಲ.

ಆದ್ದರಿಂದ ಶುಕ್ರವಾರ ಬೆಳಗ್ಗೆ ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರರ ನೇತೃತ್ವದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಿ ₹24 ಕೋಟಿ ಮೌಲ್ಯದ 12 ಗುಂಟೆ ಜಾಗವನ್ನು ವಶಕ್ಕೆ ಪಡೆದುಕೊಂಡರು ಎಂದು ಕಾರ್ಯಪಾಲಕ ಅಭಿಯಂತರ ರವಿಕುಮಾರ್‌ ತಿಳಿಸಿದ್ದಾರೆ.