ಸಾರಾಂಶ
ಬೆಂಗಳೂರು : ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಕಿರಣ್ (22) ಮೃತ ದುರ್ದೈವಿ. ಹೊಸಕೆರೆಹಳ್ಳಿಯ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಕಿರಣ್, ಭಾನುವಾರ ರಾತ್ರಿ ಮತ್ತಿಕೆರೆಯಲ್ಲಿ ಸ್ನೇಹಿತರನ್ನು ಮಾತನಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸ್ ಹೋಗುತ್ತಿದ್ದರು.
ಈ ವೇಳೆ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಕೂಡಲೇ ಕಿರಣ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆಯೇ ಕಿರಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರರಿಗೆ ಕಿರಣ್ ಮೃತದೇಹವನ್ನು ಹಸ್ತಾಂತರಿಸಿದ್ದಾರೆ.
ಅಪಘಾತದ ಬಳಿಕ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ವಾಹನ ಹಾಗೂ ಅದರ ಚಾಲಕನನ್ನು ಪತ್ತೆಹಚ್ಚಲಾಗುವುದು. ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
)
)
;Resize=(128,128))
;Resize=(128,128))
;Resize=(128,128))
;Resize=(128,128))