ಸಾರಾಂಶ
ಮುಂಬೈ : ಬೆಳಗಾವಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು ಮೇ 27ರವರೆಗೆ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.
ಅಗಿದ್ದೇನು?:
ಮೇ 18ರಂದು ಘಟನೆ ನಡೆದಿದೆ. ಅಂದು 3 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ರಾತ್ರಿ 10 ಗಂಟೆಗೆ ಸಿನಿಮಾ ವೀಕ್ಷಿಸಲು ನಿರ್ಧರಿಸಿದ್ದಳು. ಅದಕ್ಕೂ ಮುನ್ನ ತನ್ನ ಸ್ನೇಹಿತರ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಸ್ನೇಹಿತರು, ಸಂತ್ರಸ್ತೆಗೆ ಮತ್ತು ಬರಿಸುವ ಮಿಶ್ರಣ ಬೆರೆಸಿ ಪಾನೀಯ ನೀಡಿದರು. ಆಗ ಆಕೆ ಪ್ರಜ್ಞೆ ತಪ್ಪಿದ್ದಾರೆ. ಇದನ್ನೇ ಉಪಯೋಗಿಸಿಕೊಂಡ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾರೆ. ಜೊತೆಗೆ ಬಹಿರಂಗಪಡಿಸಿದರೆ, ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಒಡ್ಡಿದ್ದಾರೆ.
ಬಳಿಕ ಸಂತ್ರಸ್ತೆಯು ಬೆಳಗಾವಿಯಲ್ಲಿದ್ದ ತನ್ನ ಪೋಷಕರಿಗೆ ಘಟನೆಯನ್ನು ವಿವರಿಸಿದ್ದಾರೆ. ಕೂಡಲೇ ಪೋಷಕರು ದೂರು ದಾಖಲಿಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.