ದುಶ್ಚಟಕ್ಕೆ ಹಣಕ್ಕಾಗಿ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾ ಕದಿಯುತ್ತಿದ್ದ ಇಬ್ಬರು ಜೈಲು ಪಾಲು

| Published : Sep 27 2024, 01:16 AM IST / Updated: Sep 27 2024, 04:36 AM IST

man-arrested-for-removing-condom-secretly-while-having-sex
ದುಶ್ಚಟಕ್ಕೆ ಹಣಕ್ಕಾಗಿ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾ ಕದಿಯುತ್ತಿದ್ದ ಇಬ್ಬರು ಜೈಲು ಪಾಲು
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನಲ್ಲಿ ಮನೆ ಎದುರು ನಿಲುಗಡೆ ಮಾಡಿದ್ದ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ₹3.25 ಲಕ್ಷ ಮೌಲ್ಯದ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಬಂಧನದಿಂದ ಐದು ಪ್ರಕರಣಗಳು ಪತ್ತೆಯಾಗಿವೆ.

 ಬೆಂಗಳೂರು : ಮನೆ ಎದುರು, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಲ್ಲಾಳ ಮುಖ್ಯರಸ್ತೆಯ ಸೊಣ್ಣೇನಹಳ್ಳಿ ನಿವಾಸಿ ಅಮ್ಜದ್‌ ಖಾನ್‌(19) ಮತ್ತು ಫೈರೋಜ್‌ ಪಾಷಾ(19) ಬಂಧಿತರು. ಆರೋಪಿಗಳಿಂದ ₹3.25 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳು ಹಾಗೂ ಮೂರು ಆಟೋರಿಕ್ಷಾಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ನಾಗರಬಾವಿ ನಿವಾಸಿ ಹರ್ಷ ಎಂಬುವವರು ತಮ್ಮ ಮನೆ ಎದುರು ನಿಲುಗಡೆ ಮಾಡಿದ್ದ ಆಟೋರಿಕ್ಷಾ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಶೋಕಿಲಾಲರಾಗಿದ್ದು, ದುಶ್ಚಟಗಳ ದಾಸರಾಗಿದ್ದಾರೆ. ದುಶ್ಚಟಗಳಿಗೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ವಾಹನ ಕಳ್ಳತನಕ್ಕೆ ಇಳಿದಿದ್ದರು. ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳನ್ನು ಕಳವು ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಐದು ಪ್ರಕರಣ ಪತ್ತೆ:

ಈ ಇಬ್ಬರ ಬಂಧನದಿಂದ ಚಂದ್ರಾಲೇಔಟ್‌ ಠಾಣೆಯಲ್ಲಿ ದಾಖಲಾಗಿದ್ದ ಆಟೋ ಕಳವು, ಜ್ಞಾನಭಾರತಿ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳವು ಹಾಗೂ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ದಾಖಲಾಗಿದ್ದ ಎರಡು ಆಟೋ ಹಾಗೂ ಒಂದು ದ್ವಿಚಕ್ರ ವಾಹನ ಕಳವು ಸೇರಿದಂತೆ ಒಟ್ಟು 5 ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.