ನೆಲಮಾಕನಹಳ್ಳಿ ಗೇಟ್ ಬಳಿ ಬೈಕ್ ಸವಾರ ಸಾವು
KannadaprabhaNewsNetwork | Published : Oct 27 2023, 12:30 AM IST
ನೆಲಮಾಕನಹಳ್ಳಿ ಗೇಟ್ ಬಳಿ ಬೈಕ್ ಸವಾರ ಸಾವು
ಸಾರಾಂಶ
ಬೈಕ್ ಸವಾರ ಸಾವು, ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತ
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತ ಮಳವಳ್ಳಿ: ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ತಾಲೂಕಿನ ಮಾರ್ಕಾಲು ಗ್ರಾಮದ ಶಶಿಕುಮಾರ್ ಅಲಿಯಾಸ್ ಶಿವಕುಮಾರ್(23) ಮೃತಪಟ್ಟ ಬೈಕ್ ಸವಾರ. ಖಾಸಗಿ ಕಂಪನಿಯಲ್ಲಿ ಡೆಲಿವರಿ ಬಾಯ್ ಯಾಗಿ ಕೆಲಸ ಮಾಡುತ್ತಿದ್ದ ಶಶಿಕುಮಾರ್ ಕೆಲಸ ಮುಗಿಸಿಕೊಂಡು ಕೆ.ಎಂ.ದೊಡ್ಡಿ ಕಡೆಯಿಂದ ಮಾರ್ಕಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮದ್ದೂರು- ಮಳವಳ್ಳಿ ಹೆದ್ದಾರಿ ಬದಿಯಲ್ಲಿ ಮರಗಳನ್ನು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಶಶಿಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಬಿ.ಜಿ.ಮಹೇಶ್, ಪಿಎಸ್‌ಐ ಶ್ರವಣ ಸ ದಾಸರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.