ಸಾರಾಂಶ
‘ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಸಿಖ್ ಘಟಕ ಬುಧವಾರ ಪ್ರತಿಭಟನೆ ನಡೆಸಿತು.
ನವದೆಹಲಿ: ‘ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಸಿಖ್ ಘಟಕ ಬುಧವಾರ ಪ್ರತಿಭಟನೆ ನಡೆಸಿತು.
ವಿಜ್ಞಾನ ಭವನದಿಂದ ಸೋನಿಯಾ ಗಾಂಧಿ ಅವರ 10 ಜನಪಥ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ತಾವು ಅತ್ಯಂತ ಸುರಕ್ಷಿತರಾಗಿದ್ದೇವೆ’ ಎಂದರು ಹಾಗೂ ‘ರಾಹುಲ್ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.
ಈ ನಡುವೆ ಬಿಜೆಪಿ, ‘ರಾಹುಲ್ ವಿದೇಶದಲ್ಲಿ ದೇಶವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿದೆ.