ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ಬಿಎಂಟಿಸಿ ಅಧಿಕಾರಿಗೆ 3 ವರ್ಷ ಜೈಲುವಾಸ, 70 ಲಕ್ಷ ರು. ದಂಡ

| N/A | Published : Nov 04 2025, 03:45 AM IST / Updated: Nov 04 2025, 09:36 AM IST

BMTC official corruption case
ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ಬಿಎಂಟಿಸಿ ಅಧಿಕಾರಿಗೆ 3 ವರ್ಷ ಜೈಲುವಾಸ, 70 ಲಕ್ಷ ರು. ದಂಡ
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

  ಬೆಂಗಳೂರು :  ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕಗೆ ಶಿಕ್ಷೆ

ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ.ರಾಮಕೃಷ್ಣ ರೆಡ್ಡಿ ಶಿಕ್ಷೆಗೆ ಗುರಿಯಾದವರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ.ರಾಮಕೃಷ್ಣ ರೆಡ್ಡಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು,

ಬಳಿಕ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಕೆ.ಬಿ.ರಾಮಕೃಷ್ಣ ರೆಡ್ಡಿ ಅವರು ಆದಾಯಕ್ಕಿಂತ 61.45 ಲಕ್ಷ ರು. ಮೌಲ್ಯದ ಅಧಿಕ ಆಸ್ತಿ ಹೊಂದಿರುವುದನ್ನು ಬಯಲಿಗೆ ತಂದಿದ್ದರು. ಈ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಅ.31ರಂದು ಆರೋಪಿ ಕೆ.ಬಿ.ರಾಮಕೃಷ್ಣ ರೆಡ್ಡಿಗೆ ಮೂರು ವರ್ಷ ಕಠಿಣ ಸಜೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಅಂತಿಮ ತೀರ್ಪು ನೀಡಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಸಾದ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪುನಲ್ಲಿ ಉಲ್ಲೇಖಿಸಿದೆ. ಲೋಕಾಯುಕ್ತ ಪೊಲೀಸರ ಪರ ಸರ್ಕಾರಿ ಅಭಿಯೋಜಕ ಮಂಜುನಾಥ ಹೊನ್ನಯ್ಯ ನಾಯಕ್‌ ಅವರು ಸಮರ್ಪಕ ವಾದ ಮಂಡಿಸಿದ್ದರು.

Read more Articles on