ಸಾರಾಂಶ
ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್‌ನೊಬ್ಬನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್‌ನೊಬ್ಬನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುದ್ದಗುಂಟೆಪಾಳ್ಯದ ಸತ್ಯನಾರಾಯಣ ಮಹತೋ(25) ಬಂಧಿತ. ಈತನಿಂದ ₹24 ಸಾವಿರ ಮೌಲ್ಯದ 410 ಗ್ರಾಂ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಡಕಾಯಿತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮೊನೀಷ್ ಎಂಬಾತ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಬಿಹಾರ ಮೂಲದ ಸತ್ಯನಾರಾಯಣ ಮಹತೋ ಉದ್ಯೋಗ ಅರಸಿ ನಗರಕ್ಕೆ ಬಂದು ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದ. ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಮಾದಕವಸ್ತು ಮಾರಾಟಕ್ಕೆ ಇಳಿದಿದ್ದ. ಹೊರರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರಕ್ಕೆ ತಂದು ಪರಿಚಿತ ಗಿರಾಕಿಗಳಿಗೆ ದುಬಾರಿ ಹಣಕ್ಕೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.