ಆ್ಯಂಬುಲೆನ್ಸ್ ಬ್ರೇಕ್ ಫೇಲ್, ಲಾರಿಗೆ ಡಿಕ್ಕಿ: ರೋಗಿ ಸಾವು

| Published : Oct 25 2023, 01:15 AM IST

ಆ್ಯಂಬುಲೆನ್ಸ್ ಬ್ರೇಕ್ ಫೇಲ್, ಲಾರಿಗೆ ಡಿಕ್ಕಿ: ರೋಗಿ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಅಂಬುಲೆನ್ಸ್ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬೂಲೆನ್ಸ್ ನಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಬೆಂಗಳೂರು- ತುಮಕೂರು ರಸ್ತೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ದಾಬಸ್‌ಪೇಟೆ: ಅಂಬುಲೆನ್ಸ್ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬೂಲೆನ್ಸ್ ನಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಬೆಂಗಳೂರು- ತುಮಕೂರು ರಸ್ತೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ಮೂಲದ ವಿಜಯಕುಮಾರ್ (40) ಮೃತಪಟ್ಟ ದುರ್ದೈವಿ, ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೃತ ವಿಜಯಕುಮಾರ್ ಸಣ್ಣ ವಯಸ್ಸಿಗೆ ಕ್ಯಾನ್ಸರ್ ಗೆ ತುತ್ತಾಗಿದ್ದು, ಚಿಕಿತ್ಸೆ ಪಡೆದು ಸಾವನ್ನು ಗೆದ್ದಿದ್ದರು. ಆದರೆ, ಸಣ್ಣ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರಿಗೆ ಆಂಬ್ಯೂಲೆನ್ಸ್ ನಲ್ಲಿ ಬರುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರ ಬೊಮ್ಮನಹಳ್ಳಿ ಗ್ರಾಮದ ಬಳಿ ಆ್ಯಂಬೂಲೆನ್ಸ್‌ ಬ್ರೇಕ್ ಫೆಲ್ಯೂರ್ ಆಗಿದ್ದು, ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆ್ಯಂಬೂ

ಲೆನ್ಸ್ ನ ಮುಂಭಾಗ ಜಖಂಗೊಂಡಿದ್ದು, ಕ್ಯಾನ್ಸರ್ ಗೆದ್ದಿದ್ದ ವಿಜಯ್ ಕುಮಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಟೋ 4 : ಮೃತಪಟ್ಟ ವಿಜಯ್ ಕುಮಾರ್

ಪೋಟೋ 5 : ಅಪಘಾತಕ್ಕೀಡಾದ ಅಂಬ್ಯುಲೆನ್ಸ್