ಸಾರಾಂಶ
ಇತ್ತೀಚೆಗೆ ಹಾಡಹಗಲೇ ಮನೆಯೊಂದರ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 2.50 ಲಕ್ಷ ರು. ಮೌಲ್ಯದ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 2 ಸಾವಿರ ರು. ನಗದು ಜಪ್ತಿ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಇತ್ತೀಚೆಗೆ ಹಾಡಹಗಲೇ ಮನೆಯೊಂದರ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 2.50 ಲಕ್ಷ ರು. ಮೌಲ್ಯದ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 2 ಸಾವಿರ ರು. ನಗದು ಜಪ್ತಿ ಮಾಡಲಾಗಿದೆ.ಆನೇಕಲ್ ನಿವಾಸಿ ವೆಂಕಟೇಶ್ ಅಲಿಯಾಸ್ ವೆಂಕಿ (27) ಬಂಧಿತ. ಕಳೆದ ಡಿ.12ರಂದು ವಿರಾಟ್ ನಗರದ ನಾಡಮ್ಮ ಲೇಔಟ್ ನಿವಾಸಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದರು. ಸಂಜೆ ಬಂದು ನೋಡಿದಾಗ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ ನಗದು, ಚಿನ್ನಾಭರಣ ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಾತ್ಮೀದಾರು ನೀಡಿದ ಮಾಹಿತಿ ಮೇರೆಗೆ ಇತ್ತೀಚೆಗೆ ಆಂಧ್ರಹಳ್ಳಿ 2ನೇ ಕ್ರಾಸ್‌ನಲ್ಲಿ ವೆಂಕಟೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿ ಮೇರೆಗೆ ಹನುಮಂತನಗರದ ವಿದ್ಯಾಪೀಠ ಸರ್ಕಲ್‌ನ ಜುವೆಲರಿ ಅಂಗಡಿಯಲ್ಲಿ ಅಡಮಾನವಿರಿಸಿದ್ದ 30 ಗ್ರಾಂ ಚಿನ್ನಾಭರಣ, ಸಂಬಂಧಿಗೆ ನೀಡಿದ್ದ 12 ಗ್ರಾಂ ಚಿನ್ನಾಭರಣ ಮತ್ತು 137 ಗ್ರಾಂ ಬೆಳ್ಳಿವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.