ಸಾರಾಂಶ
ದ್ವಿಚಕ್ರ ವಾಹನ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿ ಆಗಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ದ್ವಿಚಕ್ರ ವಾಹನ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿ ಆಗಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಎಜಿಎಸ್ ಲೇಔಟ್‌ನ ಕವಿತಾ ಸರ ಕಳೆದುಕೊಂಡವರು. ಶನಿವಾರ ಸೊಸೆಯ ಜತೆಗೆ ವಸಂತಪುರದಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾತ್ರಿ 9.30ರ ಸುಮಾರಿಗೆ ಸೊಸೆಯ ಜತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸ್ ಬರುವಾಗ ಮಾರ್ಗ ಮಧ್ಯೆ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದ ಇಬ್ಬರು ಅಪರಿಚಿತರು, ಹಿಂಬದಿ ಕುಳಿತಿದ್ದ ಕವಿತಾ ಅವರ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ವೇಳೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸೊಸೆ ದುಷ್ಕರ್ಮಿಗಳನ್ನು ಬೆನ್ನಟ್ಟಲು ಪ್ರಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ವೇಗವಾಗಿ ದ್ವಿಚಕ್ರ ವಾಹನ ಓಡಿಸಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.